ಹುನಗುಂದ: ಮಲಪ್ರಭಾ ನದಿ ತೀರ ಹಾಗೂ ಹಳ್ಳದ ದಡದ ಜಮೀನುಗಳಲ್ಲಿ ಮರಳು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಲೋಕಾಯುಕ್ತರ ತಂಡ ಬುಧವಾರ ದಾಳಿ ಮಾಡಿ ಅಕ್ರಮದಲ್ಲಿ ಪಾಲ್ಗೊಂಡಿದ್ದ ಜಮೀನು ಮಾಲೀಕರು, ಹಿಟಾಚಿ ಮಾಲೀಕರು ಹಾಗೂ ಚಾಲಕರ ಮೇಲೆ ತಾಲ್ಲೂಕಿನಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.

ತಾಲ್ಲೂಕಿನ ಹಡಗಲಿ ಗ್ರಾಮದ ಮಲಪ್ರಭಾ ನದಿ ತೀರದ ಜಮೀನುಗಳಿಗೆ ಹೊಂದಿಕೊಂಡಿರುವ ಮಲಪ್ರಭಾ ನದಿಯಲ್ಲಿ ಮರಳು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಎರಡು ಹಿಟಾಚಿಗಳು ವಶಕ್ಕೆ ಪಡೆಯಲಾಗಿದ್ದು, ಹಿಟಾಚಿ ಜಮೀನು ಮಾಲೀಕ ಹಾಗೂ ಚಾಲಕರ ಮೇಲೆ ದೂರು ದಾಖಲಿಸಲಾಗಿದೆ.

ಚಿಕ್ಕಮಳಗಾವಿ ಗ್ರಾಮದ ಜಮೀನಿಗೆ ಹೊಂದಿಕೊಂಡಿರುವ ಮಲಪ್ರಭಾ ನದಿ ಹಾಗೂ ಹಿರೇಮಳಗಾವಿ ಗ್ರಾಮದಲ್ಲಿ ಮರಳು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಜೆಸಿಬಿ ವಾಹನ ವಶಕ್ಕೆ ಪಡೆದು ಮಾಲೀಕರು ಹಾಗೂ ಚಾಲಕರ ವಿರುದ್ಧ ದೂರು ದಾಖಲಿಸಲಾಗಿದೆ.

ಅಮರಾವತಿ ವ್ಯಾಪ್ತಿಯಲ್ಲಿ ಬರುವ ಕಾಡಗಿಹಳ್ಳದ ಹತ್ತಿರ ಎರಡು ಟಿಪ್ಪರ್ ಹಾಗೂ ಮರಳು ತೊಳೆಯಲು ಬಳಸುತ್ತಿದ್ದ ಟ್ರ್ಯಾಕ್ಟರ್ ವಶಪಡಿಸಿಕೊಂಡಿರುವುದರ ಜೊತೆಗೆ ಅಮರಾವತಿ ಗ್ರಾಮದಲ್ಲಿ ಮರಳು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಜಮೀನು, ವಾಹನ ಮಾಲೀಕರು ಹಾಗೂ ಚಾಲಕರ ವಿರುದ್ಧ ದೂರು ದಾಖಲಿಸಲಾಗಿದೆ.

ಚಿತ್ತವಾಡಗಿ ಗ್ರಾಮದ ಜಮೀನಿನಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಒಂದು ಹಿಟಾಚಿ ಮಾಲೀಕರು, ಜಮೀನಿನ ಮಾಲೀಕ ಹಾಗೂ ಚಾಲಕರ ವಿರುದ್ಧ ದಾಖಲಿಸಿದ್ದಾರೆ.

ಈ ಮೇಲಿನ ಐದು ಪ್ರಕರಣಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧೀಕ್ಷಕ ಮಲ್ಲಿಕಾರ್ಜುನ ಜಂಬಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-19-1256202000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.