ಹುನಗುಂದ: ಸಾರ್ವಜನಿಕರ ಕೆಲಸ ಮಾಡಿಕೊಡುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಗುರುವಾರ ಸರ್ಚ್ ವಾರೆಂಟ್ನೊಂದಿಗೆ ಆಗಮಿಸಿದ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡ ನಗರದ ಪುರಸಭೆಯಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ನಡೆಸಿತು.

ನಂತರ ಪುರಸಭೆಯ ವಾತಾವರಣ ಪರಿಶೀಲಿಸಿದ ಲೋಕಾಯುಕ್ತ ಎಸ್ಪಿ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ನಂತರ ಸುದ್ದಿಗಾರರೊಂದಿಗೆ ಲೋಕಾಯುಕ್ತ ಎಸ್ಪಿ ಮಾನಿಂಗ್ ನಂದಗಾವಿ ಮಾತನಾಡಿ, ಪುರಸಭೆಯಲ್ಲಿ ಪ್ರಮುಖವಾಗಿ ಇ-ಸ್ವತ್ತು, ಖಾತಾ ಬದಲಾವಣೆ, ಎನ್ಒಸಿ ಮತ್ತು ಕಟ್ಟಡ ಕಟ್ಟಲು ಅನುಮತಿ ನೀಡುವದರಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಲಂಚ ಕೇಳಿ ಅವ್ಯವಹಾರ ಮಾಡುವುದು. ಸಾರ್ವಜನಿಕರು ಭರಣ ಮಾಡಿದ ತೆರಿಗೆ ಹಣಕ್ಕೆ ಸರಿಯಾಗಿ ದಾಖಲೆಗಳಿಲ್ಲದಿರುವುದು ಸೇರಿದಂತೆ ಇನ್ನಿತರ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ವಿಳಂಬ ಧೋರಣೆ ಅನುಸರಿಸುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ಬೆಂಗಳೂರಿನ ರಾಜ್ಯ ಲೋಕಾಯುಕ್ತರ ಮುಖ್ಯ ಕಚೇರಿಗೆ ದೂರುಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ನಾವು ಸರ್ಚ್ ವಾರೆಂಟ್ನೊಂದಿಗೆ ಬೆಳಿಗ್ಗೆ ಪುರಸಭೆ ಕಚೇರಿಗೆ ಆಗಮಿಸಿ ದೂರುಗಳಿಗೆ ಸಂಬಂಧಪಟ್ಟ ವಿವಿಧ ಕಡತಗಳ ಪರಿಶೀಲನೆ ಕಾರ್ಯ ನಡೆದಿದೆ ಎಂದರು.

ಇದೇ ಸಂದರ್ಭದಲ್ಲಿ ಪುರಸಭೆ ಕಚೇರಿಯಲ್ಲಿ ಸಾರ್ವಜನಿಕರಿಗೆ ಉತಾರ ಕೊಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಮಾಹಿತಿ ತಿಳಿದ ತಕ್ಷಣ ಸ್ಥಳದಲ್ಲಿಯೇ ನಾಲ್ವರಿಗೆ ಉತಾರ ಕೊಡಿಸಲಾಯಿತು. ಕಡತಗಳ ಶೋಧನಾ ಕಾರ್ಯ ಪ್ರಗತಿಯಲ್ಲಿದೆ ಎಂದು ಲೋಕಾಯುಕ್ತ ಎಸ್ಪಿ ಮಾಹಿತಿ ನೀಡಿದರು.

ಲೋಕಾಯುಕ್ತರ ಎಸ್ಪಿ ತಂಡದೊಂದಿಗೆ ಡಿವೈ ಎಸ್ಪಿ ಸುರೇಶ್ ರೆಡ್ಡಿ, ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಬಿರಾದಾರ, ಭೀಮನಗೌಡ ಬಿರಾದಾರ, ಎನ್.ಎ. ಖಿಲಾರಿ ಹಾಗೂ ಸಿಬ್ಬಂದಿಗಳು ಸೇರಿದಂತೆ ಒಟ್ಟು 15 ಜನರ ತಂಡದೊಂದಿಗೆ ಆಗಮಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-19-485165324

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.