ಹುನಗುಂದ: ನಾರಾಯಣಪುರ ಜಲಾ ಶಯದ ಹಿನ್ನೀರು ಹಾಗೂ ಮಲಪ್ರಭಾ ಪ್ರವಾಹದಿಂದ ಬಾಧಿತ ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ಮೂಲ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಹದಿಮೂರನೇ ದಿನವಾದ ಸೋಮವಾರವೂ ಮುಂದುವರಿಯಿತು.

ಧರಣಿ ನಿರತ ಸ್ಥಳಕ್ಕೆ ತಾಲ್ಲೂಕಿನ ಬಿಸನಾಳ ಗ್ರಾಮದ ಸುಮಿತ್ರವ್ವ ಗ್ಯಾನಪ್ಪನವರ, ಪವಾಡೆವ್ವ ಬರದೆಲಿ ಸೇರಿದಂತೆ 15ಕ್ಕೂ ಹೆಚ್ಚು ಮಹಿಳೆಯರು ಆಗಮಿಸಿ ಬೆಂಬಲ ಸೂಚಿಸಿದರು. ಸೋಮವಾರ ಇದ್ದಲಗಿ ಗ್ರಾಮದ ಇಬ್ಬರು ಸಂತ್ರಸ್ತರ ಪ್ರತಿನಿಧಿಗಳಾಗಿ ಬಾಗಲಕೋಟೆಯ ಪುನರ್ವಸತಿ ಮತ್ತು ಪುನರ್ನಿರ್ಮಾಣ ಹಾಗೂ ಭೂ ಸ್ವಾಧೀನ ಇಲಾಖೆಯ ಪ್ರಧಾನ ವ್ಯವಸ್ಥಾಪಕ (ಜಿಎಂ) ಗಜಾನನ ಬಾಲೆ ಅವರನ್ನು ಕಚೇರಿಯಲ್ಲಿ ಭೇಟಿ ಯಾಗಿ ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.

ಸಂತ್ರಸ್ತರ ಪ್ರತಿನಿಧಿಯೊಂದಿಗೆ ಪುನ ರ್ವಸತಿ ಮತ್ತು ಪುನರ್ನಿರ್ಮಾಣ ಹಾಗೂ ಭೂ ಸ್ವಾಧೀನ ಇಲಾಖೆಯ ಪ್ರಧಾನ ವ್ಯವಸ್ಥಾಪಕರು ಮಾತನಾಡಿ, ಪುನರ್ವಸತಿ ವಿಭಾಗದ ತಂಡವೊಂದು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಸಂತ್ರಸ್ತರ ಪ್ರತಿನಿಧಿಯೊಬ್ಬರು ಪತ್ರಿಕೆಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-19-139038658

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.