ಹುನಗುಂದ: ಅತಿಯಾದ ಮಳೆ ಹಾಗೂ ಪ್ರವಾಹದ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದು ವಿಪತ್ತು ನಿರ್ವಹಣಾ ತಾಲ್ಲೂಕು ನೋಡಲ್ ಅಧಿಕಾರಿ ಮಲ್ಲನಗೌಡ ಬಿರಾದಾರ ಹೇಳಿದರು.

ಬುಧವಾರ ನಗರದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ, ಶಾಲೆಗಳನ್ನು ಗುರುತಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿನ ಒಳಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ತಾಲ್ಲೂಕಿನಲ್ಲಿರುವ ರಸ್ತೆಗಳನ್ನು ಪರಿಶೀಲಿಸಿ, ತೆಗ್ಗು ಗುಂಡಿಗಳನ್ನು ಹಾಗೂ ಮಳೆಗಾಲವಿರುವುದರಿಂದ ಯಾವುದೇ ಅವಘಡ ಸಂಭವಿಸದಂತೆ ಶಿಥಿಲಾವ್ಯಸ್ಥೆಯಲ್ಲಿರುವ ವಿದ್ಯುತ್ ಕಂಬಗಳನ್ನು ಸರಿಪಡಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮುರುಳೀಧರ ದೇಶಪಾಂಡೆ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳು ಮನೆ ಹಾನಿ, ಜೀವ ಹಾನಿ ಹಾಗೂ ಜಾನುವಾರು ಹಾನಿಗಳ ಬಗ್ಗೆ ತುರ್ತಾಗಿ ಮಾಹಿತಿ ಸಲ್ಲಿಸಬೇಕು. ಸಾರ್ವಜನಿಕರಿಗೆ ಜಂತಿ ಮನೆಯಿಂದ ಸುರಕ್ಷಿತ ಸ್ಥಳಗಳಲ್ಲಿ ವಾಸಿಸಲು ಹಾಗೂ ನದಿಗಳ ಹತ್ತಿರ ಹೋಗದಂತೆ ತಿಳಿಸಬೇಕು. ಮಲಪ್ರಭಾ ಹಾಗೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಬಂದ ಸಂದರ್ಭದಲ್ಲಿ ಬ್ಯಾರೇಜ್ ಗೇಟ್ಗಳನ್ನು ತುರ್ತಾಗಿ ತೆಗೆದು ಪ್ರವಾಹ ಪರಿಸ್ಥಿತಿ ಬಾರದಂತೆ ನೋಡಿಕೊಳ್ಳಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕರಿಗೆ ರೈತರಿಗೆ ಬೀಜ, ಗೊಬ್ಬರಗಳ ಸರಿಯಾಗಿ ಹಂಚಿಕೆ ಮಾಡಿ ಜೊತೆಗೆ ಬೆಳೆ ಹಾನಿ ಮಾಹಿತಿಯನ್ನು ತುರ್ತಾಗಿ ಸಲ್ಲಿಸಲು ತಿಳಿಸಿದರು.

ಗ್ರೇಡ್ 2 ತಹಶೀಲ್ದಾರ್ ಮಹೇಶ ಸಂದಿಗೌಡ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-19-125509167

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.