ಹುನಗುಂದ: ಸಂತ್ರಸ್ತರಿಗೆ ತಿಂಗಳ ಒಳಗಾಗಿ ಹೊಸ ಶೆಡ್ಗಳ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಶಾಸಕ ವಿಜಯಾನಂದ ಕಾಶಪ್ಪನವರ ಭರವಸೆ ನೀಡಿದರೂ ಧರಣಿ ನಿರತರು ತಮ್ಮ ಪಟ್ಟು ಸಡಿಲಿಸದೆ ಧರಣಿ ಮುಂದುವರೆಸಿದರು.

ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ಮೂಲಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇ ರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಅವರು ಮಾತನಾಡಿದರು.

ನನ್ನ ಅವಧಿಯಲ್ಲಿಯೇ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕೇಂದ್ರ ಮಂಜೂರು ಮಾಡಿಸಿರುವೆ. ತಾಲ್ಲೂಕಿನ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕೇಂದ್ರದ ಸಮಸ್ಯೆಗಳ ಕುರಿತು ಎರಡು ಮೂರು ಬಾರಿ ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿರುವೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿರುವೆ. ಅತಿ ಶೀಘ್ರದಲ್ಲಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕೇಂದ್ರದ ಸ್ವಚ್ಛತೆ, ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಈಗಾಗಲೇ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕ್ರಿಯಾಯೋಜನೆ ಸಿದ್ಧಪಡಿಸಿ ಅನುದಾನ ಮಂಜೂರಿಗಾಗಿ, ವ್ಯವಸ್ಥಾಪಕರಿಗೆ ಕಳುಹಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಹಾಜರಿದ್ದ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕೇಂದ್ರದ ಅಧಿಕಾರಿಗಳಿಗೆ ಸ್ಥಳದಲ್ಲಿದ್ದು, ಗ್ರಾಮದ ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಿ ಎಂದು ಶಾಸಕರು ಸೂಚಿಸಿದರು

ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕೇಂದ್ರ ಹಾಗೂ ವಿಶೇಷ ಭೂ ಸ್ವಾಧೀನ ಅಧಿಕಾರಿ ಮಾರುತಿ ಬ್ಯಾಕೋಡ್ ಮಾತನಾಡಿ, ಗ್ರಾಮದ ಬಹುತೇಕ ಸಂತ್ರಸ್ತರಿಗೆ ಈಗಾಗಲೇ ಹಕ್ಕು ಪತ್ರ ನೀಡಲಾಗಿದೆ. ಇನ್ನುಳಿದ ಕೆಲವರು ಸರಿಯಾದ ದಾಖಲೆಗಳನ್ನು ನೀಡದಿರುವುದರಿಂದ ಹಕ್ಕುಪತ್ರ ನೀಡಲಾಗಿಲ್ಲ. ದಾಖಲೆಗಳನ್ನು ನೀಡಿದ ತಕ್ಷಣ ಅವರಿಗೂ ಹಕ್ಕು ಪತ್ರ ನೀಡಲಾಗುವುದು. ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕೇಂದ್ರದಲ್ಲಿ ಮೂಲಸೌಕರ್ಯಗಳನ್ನು ಅತಿ ಶೀಘ್ರದಲ್ಲಿ ಕಲ್ಪಿಸಲಾಗುವುದು. ಸಂತ್ರಸ್ತರ ಪ್ರಮುಖ ಬೇಡಿಕೆ ಒಂದು ಗುಂಟೆ ನಿವೇಶನದ ಬದಲು ನಾಲ್ಕು ಗುಂಟೆ ನೀಡಬೇಕು ಎಂಬ ಬೇಡಿಕೆಗೆ ನಿಯಮಾವಳಿಗಳ ಪ್ರಕಾರ ಹಿಂದಿನ ಮನೆಯ ಅಳತೆಗೆ ತಕ್ಕಂತೆ ನಿವೇಶನ ನೀಡಲಾಗುತ್ತಿದೆ ಎಂದು ಹೇಳಿದರು. ಪುನರ್ವಸತಿ ಕೇಂದ್ರದಲ್ಲಿ ಹೊಸ ಶೆಡ್ ನಿರ್ಮಾಣ ಮಾಡುವವರೆಗೂ ಧರಣಿ ಮುಂದುವರೆಸಲಾಗುವುದು ಎಂದು ಸಂತ್ರಸ್ತರು ಪಟ್ಟು ಹಿಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-19-1012717428

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.