ಹುನಗುಂದ: ‘ಕಟ್ಟಡದ ಕಾಮಗಾರಿ ಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು’ ಎಂದು ಶಾಸಕ ವಿಜಯಾನಂದ ಕಾಶಪ್ಪನ ವರ ಹೇಳಿದರು. ಸೋಮವಾರ ತಾಲ್ಲೂಕಿನ ಬಾದವಾಡಗಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಮುಸ್ಲಿಂ ಮುಖಂಡರು ಶಾಸಕರಿಗೆ ಮಸೀದಿ ನಿರ್ಮಾಣ ಅಪೂರ್ಣವಾಗಿದ್ದು, ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಿದರು. ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಸತಿ ನಿಲಯ ಸ್ಥಾಪನೆ. ಭರಮಪ್ಪ ದೇವಸ್ಥಾನ, ಮಂಗಲ ಭವನ ಸೇರಿದಂತೆ ಇತರೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಸೇರಿದಂತೆ ಇತರೆ ಬೇಡಿಕೆ ಈಡೇರಿಸುವಂತೆ ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿಕೊಂಡರು.

ಗ್ರಾಮದಲ್ಲಿ ಹಂತ, ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಗ್ರಾಮಸ್ಥರಿಗೆ ಶಾಸಕರು ಭರವಸೆ ನೀಡಿದರು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಎಸ್.ಎಸ್.ಅಂಗಡಿ, ಮುಖಂಡರಾದ ಶಿವಾನಂದ ಕಂಠಿ, ಸಂಜೀವ ಜೋಷಿ, ಮುತ್ತೇಶ ಅಗಸಿಬಾಗಿಲು, ಶರಣಪ್ಪ ಆಗಸಿಬಾಗಿಲು, ಶೇಖರಪ್ಪ ಪರೂತಿ, ನಾಗಪ್ಪ ಕಲಗೋಡಿ, ವೀರಣ್ಣ ಅಂಗಡಿ, ಬಸನಗೌಡ ಸುಂಕದ, ಶಿವಲಿಂಗಪ್ಪ ಹಳ್ಳೂರ, ವೀರನಗೌಡ ಮೇಟಿ, ಗುತ್ತಿಗೆದಾರ.ಆರ್.ಎಂ.ಕನ್ಸ್ಟ್ರಕ್ಷನ್ ಕಂಪೆನಿಯ ಹರ್ಷಕುಮಾರ ಶೆಟ್ಟಿ, ಶ್ರೀನಿವಾಸ್ ಮೇಟಿ ಮುಂತಾದವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-19-163315979

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.