ಹುನಗುಂದ: ಜನರ ನೀರಿನ ದಾಹ (ಬವಣೆ) ತೀರಿಸಬೇಕಾದ ಶುದ್ಧ ಕುಡಿಯುವ ನೀರಿನ ಘಟಕ ಕೆಲ ವರ್ಷಗಳಿಂದ ದುರಸ್ತಿ ಕಾಣದೆ ನಿರುಪಯುಕ್ತವಾಗಿದ್ದು, ಯಂತ್ರೋಪಕರಣಗಳು ದೂಳು ಹಿಡಿದಿವೆ.

ನಗರದಲ್ಲಿ ಪ್ರತಿ ಶನಿವಾರ ನಡೆಯುವ ಕಾಯಿಪಲ್ಲೆ ಮಾರುಕಟ್ಟೆಯ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ದುಸ್ಥಿತಿ ಇದು.

2016-17ನೇ ಸಾಲಿನ 14ನೇ ಹಣಕಾಸು ಯೋಜನೆಯಡಿ ಬಸ್ ನಿಲ್ದಾಣ ಸಮೀಪದ ಕಾಯಿಪಲ್ಲೆ ಮಾರುಕಟ್ಟೆ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲಾಗಿತ್ತು.

ಆರಂಭದ ಕೆಲ ದಿನಗಳು ಮಾತ್ರ ನೀರು ಪೂರೈಸಲಾಯಿತು. ಘಟಕದಿಂದ ನೀರು ಪೂರೈಕೆ ಸ್ಥಗಿತಗೊಂಡ ಕೆಲವು ವರ್ಷಗಳು ಗತಿಸಿವೆ. ಪುರಸಭೆಯವರು ಘಟಕದ ದುರಸ್ತಿಗೆ ಈವರೆಗೂ ಮುಂದಾಗಿಲ್ಲ. ಹೀಗಾಗಿ ಸುತ್ತಲಿನ ನಿವಾಸಿಗಳು, ಹೋಟೆಲ್ ಹಾಗೂ ಬೀದಿ ಬದಿ ವ್ಯಾಪಾರಿಗಳು ಕುಡಿಯುವ ನೀರಿಗಾಗಿ ದೂರದಲ್ಲಿರುವ ಘಟಕಗಳಿಗೆ ಅಲೆದಾಡಬೇಕಾಗಿದೆ.

ದೂಳು ಹಿಡಿದ ಯಂತ್ರೋಪಕರಣಗಳು: ಸೂಕ್ತ ನಿರ್ವಹಣೆ ಇಲ್ಲದಿರುವುದರಿಂದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಅಳವಡಿಸಿರುವ ಬಹುತೇಕ ಯಂತ್ರೋಪಕರಣಗಳು ದೂಳು ಹಿಡಿದಿವೆ. ಕೆಲ ಉಪಕರಣಗಳು ಕಳುವಾಗಿವೆ. ಇದರೊಂದಿಗೆ ನೀರಿನ ಘಟಕದ ಒಳಭಾಗದಲ್ಲಿ ಇಸ್ಪೀಟ್ ಕಾರ್ಡ್ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಳ್ಳುವುದರ ಜೊತಗೆ ಅವ್ಯವಸ್ಥೆಯಿಂದ ಕೂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಇಷ್ಟೆ ಅಲ್ಲದೇ ಈ ಘಟಕದ ಹತ್ತಿರ ಶೌಚಾಲಯವಿದ್ದು, ಹಂದಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿದೆ.

ಈಗಾಗಲೇ ಬೇಸಿಗೆ ಆರಂಭವಾಗಿದ್ದು ಅಲ್ಲಲ್ಲಿ ನಿಧಾನವಾಗಿ ನೀರಿನ ಬವಣೆ ಆರಂಭವಾಗಿದೆ. ಬೆಳಗಿನ ಜಾವ ಶುದ್ಧ ಕುಡಿಯುವ ನೀರು ಪಡೆಯಲು ಸಾರ್ವಜನಿಕರಿಗೆ ಹೆಚ್ಚಿನ ಸಮಯ ವ್ಯಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕದ ಸುತ್ತಮುತ್ತಲಿನ ವ್ಯಾಪಾರಿಗಳು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಲಿಖಿತವಾಗಿ ಮತ್ತು ಮೌಖಿಕವಾಗಿ ಹತ್ತಾರು ಬಾರಿ ಮನವಿ ಕೊಟ್ಟರೂ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ.ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗಿದೆ. ಸೂಕ್ತ ನಿರ್ವಹಣೆ ಇಲ್ಲದೆ ಘಟಕ ಸ್ಥಗಿತಗೊಂಡಿದೆ. ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಕೂಡಲೇ ಘಟಕವನ್ನು ದುರಸ್ತಿ ಮಾಡಿ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಹುನಗುಂದ ನಾಗರಿಕ ಸೇವಾ ಸುಧಾರಣೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಿ.ಬಿ.ಕಂಬಾಳಿಮಠ ಹೇಳಿದರು.

ಕಾಯಿ ಪಲ್ಲೆ ಮಾರುಕಟ್ಟೆ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ದುರಸ್ತಿಗೆ ಅನುದಾನ ಕಾಯ್ದಿರಿಸಿದ್ದು, ಶೀಘ್ರದಲ್ಲಿ ದುರಸ್ತಿ ಮಾಡಲಾಗುವುದು.
–ಗುರುರಾಜ ಚೌಕಿಮಠ, ಮುಖ್ಯಾಧಿಕಾರಿ ಪುರಸಭೆ, ಹುನಗುಂದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.