ಹುನಗುಂದ: ಇಲ್ಲಿನ ವಿಜಯ ಮಹಾಂತೇಶ ಪ್ರೌಢಶಾಲೆ ಹಾಗೂ ಬಾಲಕಿಯರ ಪ್ರೌಢಶಾಲೆಯ 1989-90ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವತಿಯಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಮೇ 16 ಹಾಗೂ 17ರಂದು ಎರಡು ದಿನಗಳ ಕಾಲ ನಗರದ ಬಸವ ಮಂಟಪದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಇಳಕಲ್ ಡಯಟ್ನ ಹಿರಿಯ ಉಪನ್ಯಾಸಕಿ ವಿಜಯ ಲಕ್ಷ್ಮಿ ಒಡೆಯರ್ ತಿಳಿಸಿದ್ದಾರೆ.

35 ವರ್ಷಗಳ ನಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮೇ 16 ರಂದು ಸಂಜೆ 4ಕ್ಕೆ ಸಹಪಾಠಿಗಳೊಂದಿಗೆ ಚರ್ಚಾಕೂಟ ನಡೆಯಲಿದೆ. ಮೇ 17 ರಂದು ಬೆಳಿಗ್ಗೆ 8.30ಕ್ಕೆ ನಗರದ ವಿಜಯ ಮಹಾಂತೇಶ ವೃತ್ತದಲ್ಲಿ ವಿಜಯ ಮಹಾಂತ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಗುವುದು. ಅಲ್ಲಿಂದ 1989-90ರ ಅವಧಿಯಲ್ಲಿನ ಸಹಪಾಠಿಗಳೊಂದಿಗೆ ಕಲಿಸಿದ ಗುರುಗಳನ್ನು ಮೆರವಣಿಗೆ ಮೂಲಕ ಬಸವ ಮಂಟಪಕ್ಕೆ ಕರತರಲಾಗುವುದು ಎಂದರು.

ನಂತರ ಬೆಳಿಗ್ಗೆ 9ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಇಳಕಲ್ನ ಗುರುಮಾಹಂತ ಸ್ವಾಮೀಜಿ ಹಾಗೂ ನಗರದ ಗಚ್ಚಿನಮಠದ ಅಮರೇಶ್ವರ ದೇವರು ಸಾನ್ನಿಧ್ಯ ವಹಿಸುವರು. ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸುವರು. ಸಂಘದ ಗೌರವ ಕಾರ್ಯದರ್ಶಿ ಡಾ. ಮಹಾಂತೇಶ ಕಡಪಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸುವರು.

ವಿಜಯ ಮಹಾಂತೇಶ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಸವರಾಜ ಬನ್ನಹಟ್ಟಿ, ಮುಖ್ಯ ಶಿಕ್ಷಕಿ ಶಶಿಕಲಾ ಕಡಿ ಆಗಮಿಸುವರು. ಐ.ಎಚ್.ನಾಯಕ್, ಎಲ್.ಎನ್.ಕಡಪಟ್ಟಿ, ಎಸ್.ಎಂ.ಪಲ್ಲೆದ,ಅಜ್ಜಪ್ಪ ನಾಡಗೌಡ, ಮಹೇಶ ವೀರಾಪೂರ, ಬಾಲಪ್ಪ ಕಿರಸೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-19-739699435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.