ಹುನಗುಂದ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವಿರುದ್ಧ ಅವಹೇಳನಕಾರಿ, ಅವಾಚ್ಯ ಪದಗಳಿಂದ ನಿಂದಿಸಿರುವ ಕನೇರಿ ಮಠದ ಕಾಡ ಸಿದ್ಧೇಶ್ವರ ಸ್ವಾಮೀಜಿ ವಿರುದ್ಧ ಪ್ರತಿಭಟನೆ ನಡೆಸಿದ ಜಾಗತಿಕ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕ ಹಾಗೂ ಬಸವಪರ ಸಂಘಟನೆಗಳು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶುಕ್ರವಾರ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾದ ತಾಲ್ಲೂಕು ಮಹಿಳಾ ಘಟಕ ಅಧ್ಯಕ್ಷೆ ನಾಗರತ್ನ ಭಾವಿಕಟ್ಟಿ ಮಾತನಾಡಿ, ‘ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಮಠಕ್ಕೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಮಠದಿಂದ ಉಚ್ಚಾಟಿಸಿ ರಾಜ್ಯದಿಂದ ಬಹಿಷ್ಕರಿಸಬೇಕು. ಲಿಂಗಾಯತ ಮಠಾಧೀಪತಿಗಳ ವಿರುದ್ಧ ಆಡಿದ ಅವಹೇಳನಕಾರಿ ಮಾತಿಗೆ ಬಹಿರಂಗ ಕ್ಷಮೆ ಕೇಳಬೇಕು. ಕೇಳದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಚ್ಚರಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕ್ರಪ್ಪ ಕಡಿವಾಲ ಮಾತನಾಡಿ, ‘ಬಸವ ಸಂಸ್ಕೃತಿ ಅಭಿಯಾನ ಹಮ್ಮಿಕೊಂಡಿದ್ದ ಲಿಂಗಾಯಿತ ಮಠಾಧಿಪತಿಗಳನ್ನು ಅಸಾಂವಿಧಾನಿಕ ಹಾಗೂ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಈ ಮಾತುಗಳು ಸ್ವಾಮೀಜಿಗಳ ಕುಲಕ್ಕೆ ಅಪಮಾನ. ಸಮಾಜದಲ್ಲಿ ಅಶಾಂತಿ ಹಾಗೂ ಒಣ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್ ಸ್ವಾಮೀಜಿ ಹಾಗೂ ರಾಜಕಾರಣಿಗಳ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಉಪಾಧ್ಯಕ್ಷ ಬಸವರಾಜ ಕಡಪಟ್ಟಿ, ಮುಖಂಡರಾದ ಎಂ.ಎನ್. ತೆನಹಳ್ಳಿ, ಎಸ್.ಜಿ. ಎಮ್ಮಿ, ಅಶೋಕ ಭಾವಿಕಟ್ಟಿ, ಸಿ.ಜಿ. ಹವಾಲ್ದಾರ, ಎಸ್.ಎನ್. ಹಾದಿಮನಿ, ಬಸವರಾಜ ಗೊಣ್ಣಾಗರ, ಆರ್.ಎಸ್. ರಾಜಮನಿ, ಮಹಾಂತೇಶ ಪರೂತಿ, ಕೆ. ಎಂ. ಅಗಸಿಬಾಗಿಲು, ಚಂದ್ರಶೇಖರ ಚಟ್ನಿಹಾಳ, ವಿಜಯಲಕ್ಷ್ಮಿ ಗಂಜಿಹಾಳ, ಗೀತಾ ಚಿತ್ತರಗಿ, ಅಂಬಕ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.