ಭಾನುವಾರ, ಆಗಸ್ಟ್ 14, 2022
26 °C

ಹುನಗುಂದ: ಮಂದಹಾಸ ಮೂಡಿಸಿದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುನಗುಂದ: ತಾಲ್ಲೂಕಿನಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ಜಿಟಿಜಿಟಿ ಮಳೆ ಸುರಿಯುತ್ತಿರುವುದರಿಂದ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ.

ಜೂನ್ ಮೂರನೆಯ ವಾರದಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ತಾಲ್ಲೂಕಿನ ಹುನಗುಂದ, ಅಮೀನಗಡ,ಕರಡಿ ಮತ್ತು ಇಳಕಲ್‌ ಹೋಬಳಿಗಳ ವ್ಯಾಪ್ತಿಯಲ್ಲಿ ಹೆಸರು, ಸೂರ್ಯಕಾಂತಿ, ತೊಗರಿ, ಸಜ್ಜೆ, ಉಳ್ಳಾಗಡ್ಡಿ, ಮುಸುಕಿನ ಜೋಳ, ಸೇರಿದಂತೆ ವಿವಿಧ ಬೀಜಗಳ ಬಿತ್ತನೆ ಕಾರ್ಯ ಚುರುಕುಗೊಂಡಿದೆ.

ಈಗಾಗಲೇ ಬಿತ್ತನೆ ಮಾಡಿದ ಬೆಳೆಗೆ ಜಿಟಿಜಿಟಿ ಮಳೆ ಅನಕೂಲಕರವಾಗಿ ಪರಿಣಮಿಸಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ಬಿತ್ತನೆ ಕಾರ್ಯ ಜೋರಾಗಿ ನಡೆದಿತ್ತು. ಆದರೆ ನಿರಂತರವಾಗಿ ಎರಡು ಮೂರು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ಜಮೀನಿನಲ್ಲಿ ತೇವಾವಂಶ ಹೆಚ್ಚಾಗಿ ಬಿತ್ತನೆ ಕಾರ್ಯಕ್ಕೆ ಕೆಲಸಮಯ ತಡೆಯೊಡ್ಡಿದೆ. ಮಳೆಯ ಜತಗೆ ಬಿಸಲು,ಗಾಳಿಯ ಜೋರಾಗಿದೆ.

ಲಾಕ್‌ಡೌನ್‌ ನಡುವೆಯೂ ರೈತಾಪಿ ವರ್ಗವು ಸಮೀಪದ ರೈತ ಸಂಪರ್ಕ ಕೇಂದ್ರಗಳತ್ತ ಧಾವಿಸಿ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ಖರೀದಿಯಲ್ಲಿ ತೊಡಗಿದ್ದಾರೆ. ಹುನಗುಂದ ಮತ್ತು ಇಳಕಲ್‌ ತಾಲ್ಲೂಕಿನಲ್ಲಿ ಶುಕ್ರವಾರವು ಸಾಮಾನ್ಯ ಮಳೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಹುನಗುಂದ ತಾಲ್ಲೂಕಿನಾದ್ಯಂತ 1 ಸೆಂ.ಮೀ ಮಳೆ ಬಿದ್ದಿದೆ. ಹುನಗುಂದ ತಾಲ್ಲೂಕಿನ ಅಮೀನಗಡ ಹೋಬಳಿಯಲ್ಲಿ ಅತಿ ಹೆಚ್ಚು 1.2 ಸೆಂ.ಮೀ ಮಳೆಯಾಗಿದೆ ಹಾಗೂ ಇಳಕಲ್‌ ತಾಲ್ಲೂಕಿನ ಕರಡಿ ಹೋಬಳಿಯಲ್ಲಿ ಅತಿ ಹೆಚ್ಚು 1.4 ಸೆಂ.ಮೀ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು