ಮಂಗಳವಾರ, ಜೂನ್ 28, 2022
25 °C

ಹುನಗುಂದ: ಗುಡುಗು, ಗಾಳಿ ಸಹಿತ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುನಗುಂದ: ಪಟ್ಟಣವು ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕೆಲವೆಡೆ ಗುರುವಾರ ಸಂಜೆ ಗುಡುಗು, ಗಾಳಿ ಸಹಿತ 30 ನಿಮಿಷಗಳ ಕಾಲ ಮಳೆ ಸುರಿಯಿತು. ಹುನಗುಂದ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕಟ್ಟಡವೊಂದರ ಮೇಲೆ ಅಳವಡಿಸಿದ್ದ ಸೋಲಾರ್ ಪ್ಯಾನಲ್ ಭಾರಿ ಗಾಳೆಯ ಪರಿಣಾಮ ಹಾರಿ ಹೋಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ.

ಪಟ್ಟಣವು ಸೇರಿದಂತೆ ಗ್ರಾಮೀಣ ಪ್ರದೇಶದಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿತು. ತಾಲ್ಲೂಕಿನ ನಾಗೂರು, ಯಡಹಳ್ಳಿ, , ಚಿತ್ತವಾಡಗಿ, ಬನ್ನಿಹಟ್ಟಿ, ವೀರಾಪೂರ, ಹಿರೇಬಾದವಾಡಗಿ, ಚಿಕ್ಕಬಾದವಾಡಗಿ ಸೇರಿದಂತೆ ವಿವಿಧ ಕಡೆ ಸುರಿದ ಭಾರಿ ಗಾಳಿ ಸಹಿತ, ಸಿಡಿಲಿನ ಅರ್ಭಟದೊಂದಿಗೆ ಆಲಿಕಲ್ಲು ಸಹಿತ ಮಳೆ ಸುರಿಯಿತು. ಮಳೆ, ಸಿಡಿಲಿನಬ್ಬರದೊಂದಿಗೆ ಗಾಳಿಯೂ ಜೋರಾಗಿದ್ದ ಕಾರಣ ವಿದ್ಯುತ್ ಸ್ಥಗಿತಗೊಳಿಸಲಾಗಿತ್ತು. ಮಳೆಯಿಂದಾಗಿ ರಸ್ತೆಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತು.

ರಾಂಪೂರ: ಮಳೆ

ರಾಂಪೂರ: ಗುರುವಾರ ಸಾಯಂಕಾಲ ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಕೆಲವೆಡೆ ಮಳೆಯಾಗಿದೆ. ಶಿರೂರ, ಬೆನಕಟ್ಟಿ,ಬೇವೂರು ಸೇರಿದಂತೆ ಕೆಲವು ಗ್ರಾಮಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದೆ.

ಗುಡುಗು, ಸಿಡಿಲಿನ ಅಬ್ಬರ ಜೋರಾಗಿದ್ದು, ಮಳೆಯ ಪ್ರಮಾಣ ಮಾತ್ರ ಕಡಿಮೆ ಇತ್ತು. ಮಳೆ ಪ್ರಾರಂಭಕ್ಕೂ ಮೊದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿರು. ಸಂಜೆ 7 ಗಂಟೆಯಾದರೂ ವಿದ್ಯುತ್ ಪೂರೈಕೆ ಇರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು