ಸೋಮವಾರ, ಸೆಪ್ಟೆಂಬರ್ 27, 2021
25 °C

ಜೀವಂತವಾಗಿದ್ದರೆ ಇದೇ ಅವಧಿಗೆ ಸಿಎಂ ಆಗುತ್ತೇನೆ: ಕತ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ‘ತಮ್ಮ  (ಮಾಧ್ಯಮದವರ) ಆಶಯ ಈಡೇರಿದರೆ ಮುಂದಿನ ಕೆಲವೇ ದಿನಗಳಲ್ಲಿ ನಾನು ಮುಖ್ಯಮಂತ್ರಿ ಆಗಬಹುದು’ ಎಂದು ಅರಣ್ಯ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ’ಜೀವಂತವಾಗಿದ್ದರೆ ಇದೇ ಅವಧಿ, ಸತ್ತರೆ ಮುಂದಿನ ಅವಧಿಗೆ ಸಿ.ಎಂ ಆಗಬಹುದು‘ ಎಂದು ಚಟಾಕಿ ಹಾರಿಸಿದರು.

‘ಬೆಳಗಾವಿ ಜಿಲ್ಲೆಯ ಉಸ್ತುವಾರಿ ಆಗುವ ಆಸೆ ಇದೆ. ಆಯಾ ಜಿಲ್ಲೆಯವರೇ ಉಸ್ತುವಾರಿ ಆಗಬಾರದು ಎಂಬುದು ಪಕ್ಷದ ನಿರ್ಧಾರವಾಗಿದೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯವರೇ ಆದಲ್ಲಿ ಒಳ್ಳೆಯದು. ಅಭಿವೃದ್ಧಿಗೆ ಅನುಕೂಲ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು