ಸೋಮವಾರ, ಮಾರ್ಚ್ 1, 2021
19 °C

ಕೈಮುಗಿದು ಪ್ರಾರ್ಥಿಸುತ್ತೇವೆ ಕೃಷಿ ಕಾಯ್ದೆಗೆ ಅವಕಾಶ ಕೊಡಿ: ಗೋವಿಂದ ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಕೇಂದ್ರದ ಕೃಷಿ ಕಾಯ್ದೆಗೆ ರಾಜಕೀಯ ಪ್ರೇರಿತ ಹೋರಾಟ ಸಲ್ಲ. ಕೈ ಮುಗಿದು ಪ್ರಾರ್ಥನೆ ಮಾಡುತ್ತೇವೆ ಕಾಯ್ದೆ ಅನುಷ್ಠಾನಕ್ಕೆ ಅವಕಾಶ ಮಾಡಿಕೊಡಿ ಎಂದು ರೈತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮಾಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆಯಿಂದ ರೈತರಿಗೆ ತೊಂದರೆ ಆದಲ್ಲಿ ಮುಂದೆ ತಿದ್ದುಪಡಿ ಮಾಡಬಹುದು. ಸಾರ್ವಜನಿಕ ಹಿತಕ್ಕಾಗಿ  ಹಲವು ಬಾರಿ ದೇಶದ ಸಂವಿಧಾನವನ್ನೇ ತಿದ್ದುಪಡಿ ಮಾಡಿದ್ದೇವೆ ಇನ್ನು ಕಾಯ್ದೆ ತಿದ್ದುಪಡಿ ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದ ಅವರು, ಕೃಷಿ ಕಾಯ್ದೆ ಒಂದು ಬಾರಿ ಜಾರಿಗೆ ತಂದರೆ ತಿದ್ದುಪಡಿಗೂ ಅವಕಾಶವಿದೆ ಎಂದರು.

ಕೃಷಿ ಕಾಯ್ದೆ ರೈತರ ವಿರೋಧಿಯಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ರಾಜ್ಯದಲ್ಲೆ 100 ರೈತರ ಪೈಕಿ 95 ಮಂದಿ ಕಾಯ್ದೆಯನ್ನು ಸ್ವಾಗತಿಸಿದ್ದಾರೆ. ಒಂದೆರಡು ರಾಜ್ಯಗಳಲ್ಲಿ ಮಾತ್ರ ಅದಕ್ಕೆ ವಿರೋಧ ಎದುರಾಗಿದೆ. ರೈತರನ್ನು ದಲ್ಲಾಳಿಗಳ ಶೋಷಣೆಯಿಂದ ತಪ್ಪಿಸಿ ಮಾರುಕಟ್ಟೆಯಲ್ಲಿ ಮುಕ್ತ ಅವಕಾಶ ಕಲ್ಪಿಸಬೇಕು ಎಂಬುದು ಕಾಯ್ದೆಯ ಆಶಯವಾಗಿದೆ. ಈ ಹಿಂದೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೃಷಿ ಕಾಯ್ದೆ ತಿದ್ದುಪಡಿಯನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ಪಕ್ಷ ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಅಚ್ಚರಿ ಮೂಡಿಸಿದೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ ಹಾಜರಿದ್ದರು

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.