ಹುನಗುಂದ: ಬಣಜಿಗ ಸಮುದಾಯದ 2-ಎ ಮೀಸಲಾತಿ ರದ್ದು ಮಾಡಿದರೆ ಉಗ್ರ ಹೋರಾಟ ಮಾಡಲಾಗುವುದೆಂದು ಹುನಗುಂದ- ಇಳಕಲ್ ತಾಲ್ಲೂಕು ಬಣಜಿಗ ಸಮಾಜದ ಅಧ್ಯಕ್ಷ ಬಸವರಾಜ ಬಡ್ಡಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟವು ಬಣಜಿಗ ಜಾತಿಯವರು ಪ್ರವರ್ಗ 2ಎ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ, ಅದನ್ನು ರದ್ದುಪಡಿಸಿ ಎಂದು ಇತ್ತೀಚಿಗೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನು ನಮ್ಮ ತಾಲ್ಲೂಕು ಘಟಕ ತೀವ್ರವಾಗಿ ಖಂಡಿಸುತ್ತದೆ. ನಮ್ಮ ಬಣಜಿಗ ಸಮುದಾಯದಲ್ಲಿ ಬಡವರು ಮತ್ತು ಮಧ್ಯಮವರ್ಗದವರು ಇದ್ದೇವೆ ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು 2011ರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮೀಸಲಾತಿ ನೀಡಿದ್ದಾರೆ ಎಂದರು.

ಗಂಗಾಧರ ಶೆಟ್ಟರ್, ಅಂದಾನಪ್ಪ ಹವಾಲ್ದಾರ, ಮಹಾಬಳೇಶ ಮರಟದ, ಸಂಗಣ್ಣ ಚಿನಿವಾಲರ, ಬಸವರಾಜ ಕೆಂದೂರ, ಅರುಣೋದಯ ದುದ್ಗಿ, ಸಂಗಣ್ಣ ಜೀರಿಗೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.