ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕೆಟ್‌ ನೀಡಿದರೆ ಪುತ್ರಿ ಸ್ಪರ್ಧೆ: ಶಿವಾನಂದ ಪಾಟೀಲ

Published 15 ಮಾರ್ಚ್ 2024, 15:44 IST
Last Updated 15 ಮಾರ್ಚ್ 2024, 15:44 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಪುತ್ರಿ ಸಂಯುಕ್ತಾ ಪಾಟೀಲಗೆ ಟಿಕೆಟ್ ನೀಡಿದರೆ ಸ್ಪರ್ಧಿಸುವರು’ ಎಂದು ಜವಳಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

‘ಸಂಘರ್ಷದಿಂದ ಟಿಕೆಟ್ ತೆಗೆದುಕೊಳ್ಳುವುದಿಲ್ಲ. ಸಾಮರಸ್ಯದಿಂದ ಪಡೆಯುವೆ. 2009ರಲ್ಲಿ ಇಲ್ಲಿಂದ ಸ್ಪರ್ಧಿಸುವ ಆಸಕ್ತಿ ಇತ್ತು. 2014ರಲ್ಲಿ ಟಿಕೆಟ್ ಕೇಳಿದ್ದೆ. ಪಕ್ಕದ ಜಿಲ್ಲೆಯವರು ಎಂದಾಗ ಅಸಮಾಧಾನ ಸಹಜ. ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲರಿಗೂ ಟಿಕೆಟ್ ಸಿಗುವುದಿಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ಟಿಕೆಟ್ ಆಕಾಂಕ್ಷಿಗಳ ಪೈಕಿ ಅಜಯಕುಮಾರ ಸರನಾಯಕ ಹಿರಿಯರು. ಕಳೆದ ಬಾರಿ ವೀಣಾ ಕಾಶಪ್ಪನವರ ಪರ ನಾನೇ ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಿದ್ದೇನೆ. ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ ಮಾಡುವೆ. ನನಗೆ ವಿಜಯಪುರ, ಬಾಗಲಕೋಟೆ ಜಿಲ್ಲೆ ಪ್ರತ್ಯೇಕ ಎಂಬ ಭಾವನೆಯಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT