ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಳಕಲ್ : 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ

Published : 24 ಸೆಪ್ಟೆಂಬರ್ 2024, 15:46 IST
Last Updated : 24 ಸೆಪ್ಟೆಂಬರ್ 2024, 15:46 IST
ಫಾಲೋ ಮಾಡಿ
Comments

ಇಳಕಲ್ : 'ನಗರದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆ ಯನ್ನಾಗಿ ಮೇಲ್ದರ್ಜೆಗೆ ಏರಿಸಿ, ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು' ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಭರವಸ ನೀಡಿದರು.

ಅವರು ಮಂಗಳವಾರ ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ₹85 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ವಿವಿಧ ಕಾಮಗಾರಿಗಳಿಗೆ ಭೂಮಿ ನೆರವೇರಿಸಿ ಹಾಗೂ ಹೊಸ 108 ಆಂಬುಲನ್ಸ್ ಗೆ ಚಾಲನೆ ನೀಡಿ ಮಾತನಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಸ್‌ಡಿಪಿ ಯೋಜನೆಯಡಿ ಇಳಕಲ್, ಹುನಗುಂದ ಹಾಗೂ ಕೂಡಲಸಂಗಮ ಆಸ್ಪತ್ರೆಗಳಿಗೆ ತಲಾ ₹85 ಲಕ್ಷ ಅನುದಾನ ಮಂಜೂರಾಗಿದ್ದು, ಅಗತ್ಯ ಮೂಲ ಸೌಕರ್ಯಗಳನ್ನು ಉನ್ನತೀಕರಣ ಕಾಮಗಾರಿ ನಡೆಯಲಿದೆ' ಎಂದರು.

ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಚೇತನಾ ಶ್ಯಾವಿ, ಡಾ.ವಿದ್ಯಾಶಂಕರ್, ಆಸ್ಪತ್ರೆ ಸಲಹಾ ಸಮಿತಿಯ ಸದಸ್ಯರಾದ ಶರಣಪ್ಪ ಆಮದಿಹಾಳ, ಡಾ.ಮಹಾಂತೇಶ ಅಕ್ಕಿ, ಟಿಪ್ಪು ಸುಲ್ತಾನ್ ಬಂಢಾರಿ, ಸಿ.ಪಿ.ರಾಮಗಿರಿಮಠ, ಅರುಣ ಬಿಜ್ಜಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT