ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನಸಂಖ್ಯೆ ನಿಯಂತ್ರಣ; ಕುಟುಂಬದ ದಿಟ್ಟ ನಿರ್ಧಾರ ಅಗತ್ಯ’

Published 20 ಜುಲೈ 2023, 15:32 IST
Last Updated 20 ಜುಲೈ 2023, 15:32 IST
ಅಕ್ಷರ ಗಾತ್ರ

ಕುಳಗೇರಿ ಕ್ರಾಸ್: ಜನಸಂಖ್ಯೆ ನಿಯಂತ್ರಣಕ್ಕೆ ಪತಿ, ಪತ್ನಿಯಷ್ಟೇ ಅಲ್ಲದೆ ಕುಟುಂಬದವರ ದಿಟ್ಟ ನಿರ್ಧಾರಗಳೂ ಅಗತ್ಯ ಎಂದು ಖಾನಾಪೂರ ಎಸ್.ಕೆ ಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಸುನೀಲ ರಾಠೋಡ ಅಭಿಪ್ರಾಯಪಟ್ಟರು.

ಸಮೀಪದ ಖಾನಾಪೂರ ಎಸ್.ಕೆ ಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾ.ಪಂ ಸದಸ್ಯ ಹನುಮಂತ ನರಗುಂದ ಮಾತನಾಡಿ ‘ಜನಸಂಖ್ಯಾ ನಿಯಂತ್ರಣ ಹಾಗೂ ಮಲೇರಿಯಾ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಸಮಾಜದ ಪ್ರತಿಯೊಬ್ಬ ಪ್ರಜೆಯ ಸಹಕಾರ ಬಹಳ ಮಹತ್ವದ್ದಾಗಿದೆ.

ಆರೋಗ್ಯ ಕೇಂದ್ರ ವ್ಯಾಪ್ತಿಯ ಆಯ್ದ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳ ವಿಜ್ಞಾನ ವಿಷಯ ಸಂಪನ್ಮೂಲ ಶಿಕ್ಷಕರಿಂದ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಲಾಯಿತು. ಸುಮಾರು 20ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ವಿಜ್ಞಾನ ವಿಷಯ ಶಿಕ್ಷಕರು ಹಾಗೂ 40ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಗ್ರಾ.ಪಂ ಮಾಜಿ ಅಧ್ಯಕ್ಷ ಬಸವರಾಜ ಕಟ್ಟಿಕಾರ, ಗ್ರಾ.ಪಂ ಸದಸ್ಯರಾದ ವೆಂಕಣ್ಣ ಹೊರಕೇರಿ, ಮಾರುತಿ ತಳವಾರ, ಹನುಮಂತ ನರಗುಂದ, ಲಕ್ಷ್ಮಣ ದಾದನಟ್ಟಿ, ಶೇಖಪ್ಪ ಪವಾಡಿ ನಾಯ್ಕರ, ಸಣ್ಣಬೀರಪ್ಪ ದ್ಯಾವನಗೌಡ್ರ, ರಾಮನ ಗೌಡ ದ್ಯಾವನಗೌಡ್ರ, ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT