ಇಳಕಲ್: ತಾಲ್ಲೂಕಿನ ಜಾಲಕಮಲದಿನ್ನಿ ಗ್ರಾಮ ವ್ಯಾಪ್ತಿಯಲ್ಲಿ ಹಳ್ಳಕ್ಕೆ ಹೊಂದಿಕೊಂಡ ಜಮೀನುಗಳಲ್ಲಿ ಮರಳು ಅಕ್ರಮವಾಗಿ ಗಣಿಗಾರಿಕೆಗೆ ಅವಕಾಶ ನೀಡಿದ ಜಮೀನು ಮಾಲೀಕರು ಹಾಗೂ ವಾಹನಗಳ ಮಾಲೀಕರ ವಿರುದ್ಧ ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲ್ಲೂಕಿನ ವಿವಿಧೆಡೆ ನಡೆಯುತ್ತಿದ್ದ ಮರಳು ಅಕ್ರಮ ಗಣಿಗಾರಿಕೆ ಕೇಂದ್ರಗಳ ಮೇಲೆ ಬುಧವಾರ ಲೋಕಾಯುಕ್ತರ ತಂಡಗಳು ಮೇಲೆ ದಾಳಿ ಮಾಡಿದ್ದವು. ಜಾಲಕಮಲದಿನ್ನಿ ಗ್ರಾಮದ ಹಳ್ಳಕ್ಕೆ ಹೊಂದಿಕೊಂಡಿರುವ ಒಟ್ಟು 11 ಜಮೀನುಗಳ ಮಾಲೀಕರು ಹಾಗೂ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ 3 ಹಿಟ್ಯಾಚಿ, 1 ಟಿಪ್ಪರ್ ಹಾಗೂ 1 ಬೋಟ್ ಮಾಲೀಕರು ಹಾಗೂ ಚಾಲಕರ ವಿರುದ್ಧ ದೂರು ದಾಖಲಾಗಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧೀಕ್ಷಕ ಮಲ್ಲಿಕಾರ್ಜುನ ಜಂಬಗಿ ನೀಡಿದ ದೂರಿನ ಮೇರೆಗೆ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-19-1745167113

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.