ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಮಖಂಡಿ | ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ

Published 22 ಆಗಸ್ಟ್ 2024, 15:36 IST
Last Updated 22 ಆಗಸ್ಟ್ 2024, 15:36 IST
ಅಕ್ಷರ ಗಾತ್ರ

ಜಮಖಂಡಿ: ಕಾಂಗ್ರೆಸ್ ಬೆಂಬಲಿತ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರು ಪಕ್ಷಾತೀತ, ಜಾತ್ಯತೀತವಾಗಿ ಕಾರ್ಯನಿರ್ವಹಿಸಿ ನಗರವನ್ನು ಅಭಿವೃದ್ಧಿ ಮಾಡಬೇಕು ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.

ನಗರಸಭೆಯಲ್ಲಿ ಗುರುವಾರ ನೂತನ ಅಧ್ಯಕ್ಷ ಪರಮಾನಂದ ಗವರೋಜಿ, ಉಪಾಧ್ಯಕ್ಷ ರೇಖಾ ಕಾಂಬಳೆ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

ನೂತನ ಅಧ್ಯಕ್ಷ ಪರಮಾನಂದ ಗವರೋಜಿ ಮಾತನಾಡಿ, ‘ನಗರದ 31 ವಾರ್ಡ್‌ಗಳಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತೇನೆ. ಮೂಲ ಸೌಲಭ್ಯ ಒದಗಿಸಿ ಜನರ ಸಮಸ್ಯೆಗಳ ಧ್ವನಿಯಾಗುತ್ತೇನೆ’ ಎಂದರು.

ಮುತ್ತಿನಕಂತಿ ಹಿರೇಮಠದ ಶಿವಲಿಂಗ ಪಡಿತಾರಾಧ್ಯ ಶ್ರೀಗಳು, ಹುನ್ನೂರು ಶಾಸ್ತ್ರಿಗಳು ಪೂಜೆ ಸಲ್ಲಿಸಿದರು. ಮುಖಂಡ ಬಸವರಾಜ ನ್ಯಾಮಗೌಡ, ತೌಫೀಕ ಪಾರ್ಥನಳ್ಳಿ, ಮಾಜಿ ಅಧ್ಯಕ್ಷ ಸಿದ್ದು ಮೀಶಿ, ದಾನೇಶ ಘಾಟಗೆ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT