ಭಾನುವಾರ, ಸೆಪ್ಟೆಂಬರ್ 19, 2021
25 °C

ಅಪಾಯದ ಮಟ್ಟ ಮೀರಿದ ಘಟಪ್ರಭೆ: ಮಹಾಲಿಂಗಪುರ-ಮಿರ್ಜಿ ನಡುವೆ ಸಂಪರ್ಕ ಕಡಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ನಿರಂತರ ಮಳೆಯಿಂದಾಗಿ  ಜಿಲ್ಲೆಯಲ್ಲಿ ಘಟಪ್ರಭಾ ನದಿಗೆ ಹೆಚ್ಚುತ್ತಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಮುಧೋಳ ತಾಲ್ಲೂಕಿನ ಮಿಜಿ೯ ಗ್ರಾಮದ ಹೊಸ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಮಿಜಿ೯ ಮಹಾಲಿಂಗಪೂರ ಮಧ್ಯೆ ವಾಹನ ಸಂಪಕ೯ ಕಡಿತಗೊಂಡಿದೆ.

ಘಟಪ್ರಭಾ ನದಿಗೆ ಶುಕ್ರವಾರ 15 ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಹರಿದು ಬರುತ್ತಿದೆ.

ಹೀಗಾಗಿ ಮುಧೋಳ ತಾಲ್ಲೂಕಿನಲ್ಲಿ  ನದಿ ತೀರದ ಗ್ರಾಮಗಳಿಗೆ ಪ್ರವಾಹದ ಆತಂಕ ಎದುರಾಗಿದೆ.

ಢವಳೇಶ್ವರ ಸೇತುವೆ ಜಲಾವೃತ
ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಸಮೀಪದ ಢವಳೇಶ್ವರ ಸೇತುವೆ ಶುಕ್ರವಾರ ಜಲಾವೃತಗೊಂಡಿದೆ.

ಮಹಾರಾಷ್ಟçದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಘಟಪ್ರಭಾ ನದಿ ಮೂಲಕ ಹಿಡಕಲ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರಲಾರಂಭಿಸಿದೆ.  ಸೇತುವೆ ಸಂಪರ್ಕ ಹೊಂದಿದ ಹತ್ತಾರು ಗ್ರಾಮಗಳ ಗ್ರಾಮಸ್ಥರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು