ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಹಿಪ್ಪರಗಿ ಜಲಾಶಯಕ್ಕೆ ನೀರು ಬಿಡುಗಡೆ

Last Updated 23 ಜುಲೈ 2021, 5:29 IST
ಅಕ್ಷರ ಗಾತ್ರ

ಬಾಗಲಕೋಟೆ: ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೃಷ್ಣಾ ನದಿಯಲ್ಲಿ ಹರಿಯುತ್ತಿರುವ ನೀರಿನ ಮಟ್ಟ ಹೆಚ್ಚಾಗಿದೆ.

ಕೊಯ್ನಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವುದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ನೀರಿನ ಮಟ್ಟ ನಿರಂತರವಾಗಿ ಏರುತ್ತಿರುವುದರಿಂದ ಮುಂಜಾಗರೂಕತಾ ಕ್ರಮವಾಗಿ ನದಿ ದಂಡೆಯಲ್ಲಿ ವಾಸವಿರುವವರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ರಬಕವಿ-ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ 1.13 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಜಲಾಶಯದ ನೀರಿನ ಮಟ್ಟ 521.70 ಮೀಟರ್ ಇದೆ ಎಂದು ಸಹಾಯಕ ಎಂಜಿನಿಯರ್ ವಿಠಲ ನಾಯಕ ತಿಳಿಸಿದರು.

ಸದ್ಯ ಪ್ರವಾಹದ ಭೀತಿ ಇಲ್ಲ: ಕೃಷ್ಣಾ ನದಿಯಲ್ಲಿ ಸದ್ಯ ಯಾವುದೇ ಪ್ರವಾಹದ ಭೀತಿ ಇಲ್ಲ 2.50 ಲಕ್ಷ ಕ್ಯೂಸೆಕ್ ನೀರು ಬಂದರೆ ಮಾತ್ರ ಪ್ರವಾಹ ಸ್ಥಿತಿ ಸೃಷ್ಟಿಯಾಗಲಿದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ್ ಸಂಜಯ ಇಂಗಳೆ ತಿಳಿಸಿದ್ದಾರೆ.

ಮಾಹಿತಿ ಪಡೆದ ಮುಖ್ಯಮಂತ್ರಿ: ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಹೆಚ್ಚಾದ ಕಾರಣ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಪ್ರವಾಹ ನದಿನಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ‌ ನಿಗಾ ವಹಿಸುವಂತೆ ಸೂಚನೆ ನೀಡಿದರು.

ಸರ್ಕಾರದಿಂದ ಹೆಚ್ಚಿನ‌ ನೆರವು ಬೇಕಾದಲ್ಲಿ ಕೂಡಲೇ ಕರೆ ಮಾಡುವಂತೆಯು ಸೂಚನೆ ನೀಡಿದರು. ಪ್ರವಾಹ ಪೀಡಿತ ಇತರೆ ಜಿಲ್ಲಾಧಿಕಾರಿಗಳಿಂದಲ್ಲೂ ಸಹ ಯಡಿಯೂರಪ್ಪ ಮಾಹಿತಿ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT