ಬಾಗಲಕೋಟೆ: ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ದತ್ತಾಂಶಗಳನ್ನು ಸಂಗ್ರಹಿಸಲು ಮೇ 5 ರಿಂದ 17ರವರೆಗೆ ಜಿಲ್ಲೆಯಾದ್ಯಂತ ಪರಿಶಿಷ್ಟ ಜಾತಿಯ ಜನರ ಮನೆ, ಮನೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ ಕುರಿತು ಜರುಗಿದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ ಅವರ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಯ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಮೀಕ್ಷೆ ಕೈಗೊಳ್ಳಲಾಗಿದ್ದು, ನಿಗದಿತ ಅವಧಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಮಟ್ಟದಲ್ಲಿ ಮೂವರು ಹಾಗೂ ಪ್ರತಿ ತಾಲ್ಲೂಕಿಗೆ ಐವರಂತೆ 50 ಜನ ಮಾಸ್ಟರ್ ಟ್ರೇನರ್ಗಳನ್ನು ನೇಮಕ ಮಾಡಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನು ನೇಮಕ ಮಾಡಲು ಕ್ರಮ ವಹಿಸಲಾಗುತ್ತಿದೆ. 10 ರಿಂದ 12 ಜನ ಗಣತಿದಾರರಿಗೆ ಒಬ್ಬರಂತೆ ಮೇಲ್ವಿಚಾರಕ ಅಧಿಕಾರಿ ನೇಮಿಸಲಾಗಿದೆ. ಈ ಗಣತಿ ಕಾರ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಮೊಬೈಲ್ ಮೂಲಕ ಆನ್ಲೈನ್ನಲ್ಲಿಯೇ ಸಮೀಕ್ಷೆ ನಡೆಯಲಿದೆ ಜವಾಬ್ದಾರಿಯಿಂದ ಸಮೀಕ್ಷೆ ಕಾರ್ಯ ನಡೆಸಬೇಕು ಎಂದರು.

ಏನೇ ಸಂದೇಹಗಳಿದ್ದರೂ ತರಬೇತಿಯಲ್ಲಿಯೇ ಬಗೆಹರಿಸಿಕೊಳ್ಳಬೇಕು. ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಜೊತೆ ಸೌಹಾರ್ದದಿಂದ ನಡೆದುಕೊಂಡು ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ಮನೆ ಸಮೀಕ್ಷೆ ಮುಕ್ತಾಯಗೊಂಡ ನಂತರ ಗುರುತಿಸಿರುವ ಮತಗಟ್ಟೆಗಳಲ್ಲಿ ವಿಶೇಷ ಶಿಬಿರ ಮಾಡಲಾಗುತ್ತದೆ. ಅನಿವಾರ್ಯ ಕಾರಣದಿಂದ ಕೈಬಿಟ್ಟು ಹೋದವರು ಮೇ19 ರಿಂದ 21ರವರೆಗೆ ಶಿಬಿರಗಳಿಗೆ ತೆರಳಿ ಗಣತಿದಾರರಿಗೆ ಜಾತಿ ಕುರಿತು ತಿಳಿಸಲು ಅವಕಾಶ ಕಲ್ಪಿಸಲಾಗುತ್ತದೆ. ಆನ್ಲೈನ್ ಮೂಲಕ ಜನರೇ ನೇರವಾಗಿ ಘೋಷಣೆ ಮಾಡಿಕೊಳ್ಳಲು ಅವಕಾಶವಿದೆ. ಸ್ವಯಂ ಘೋಷೆಣೆಗೆ ಆಧಾರ್ ಸಂಖ್ಯೆ ಹಾಗೂ ಆರ್ಡಿ ನಂಬರ್ ಕಡ್ಡಾಯವಾಗಿರುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಮಾತನಾಡಿ, ಜನಗಣತಿ ರೀತಿಯಲ್ಲಿ ಒಳಮೀಸಲಾತಿ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಪ್ರತಿಯೊಂದು ಅಂಶದಲ್ಲಿ ಸ್ಪಷ್ಟತೆ ಇರಬೇಕು. ಸಮೀಕ್ಷೆ ಕೈಗೊಳ್ಳುವ ಪೂರ್ವದಲ್ಲಿ ಮನೆಗಳಿಗೆ ಮುಂಚಿತವಾಗಿಯೇ ಬರುವ ಮಾಹಿತಿ ನೀಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ಸಮೀಕ್ಷೆ ಕಾರ್ಯದಲ್ಲಿ ತೊಂದರೆಗಳು ಉಂಟಾದಲ್ಲಿ 112 ಹಾಗೂ ಪೊಲೀಸ್ ಕಂಟ್ರೋಲ್ ರೂಂ ನಂ.9480803900ಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಎ.ಆರ್.ಹಂಚಿನಾಳ, ಎಸ್.ಕೆ.ಕಲ್ಲೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಉಪಸ್ಥಿತರಿದ್ದರು.

Highlights - 50 ಜನ ಮಾಸ್ಟರ್ ಟ್ರೇನರ್ ನೇಮಕ ಮನೆ, ಮನೆಗೆ ತೆರಳಿ ಸಮೀಕ್ಷೆ ಆನ್ಲೈನ್ ಮೂಲಕವೂ ನೋಂದಣಿಗೆ ಅವಕಾಶ

Cut-off box - ಒಳಮೀಸಲಾತಿ ಸಹಾಯವಾಣಿ ಬಾಗಲಕೋಟೆ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ನಡೆಯುತ್ತಿದ್ದು ಸಾರ್ವಜನಿಕರ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲಾಗಿದೆ. ಬಾಗಲಕೋಟೆ ಜಿಲ್ಲೆ (08354-235526/94808 43021) ಬಾಗಲಕೋಟೆ (94808 43058) ಬಾದಾಮಿ (94808 43057) ಬೀಳಗಿ (94808 43059) ಮುಧೋಳ (94808 43062) ಜಮಖಂಡಿ (94808 43061) ಹುನಗುಂದ (08351-260583/9480843060).

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.