ಶನಿವಾರ, ಅಕ್ಟೋಬರ್ 23, 2021
20 °C

ಬಾಗಲಕೋಟೆ: ಗುತ್ತಿಗೆದಾರ ಡಿ.ವೈ.ಉಪ್ಪಾರ ಮನೆ ಮೇಲೆ ಐಟಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಇಲ್ಲಿನ ಪ್ರಥಮ ದರ್ಜೆ ಗುತ್ತಿಗೆದಾರ  ಡಿ.ವೈ.ಉಪ್ಪಾರ ಅವರ ಗೃಹ ಕಚೇರಿಯ ಮೇಲೆ ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡಿ.ವೈ.ಉಪ್ಪಾರ ಮೂಲತಃ ವಿಜಯಪುರದವರು. ಬಾಗಲಕೋಟೆ ಜಿಲ್ಲೆಯಲ್ಲಿ ನಿರ್ಮಾಣ ಕಾಮಗಾರಿ ಗುತ್ತಿಗೆ ವ್ಯವಹಾರದಲ್ಲಿ ತೊಡಗಿದ್ದು, ಪ್ರಭಾವಿ ಗುತ್ತಿಗೆದಾರರಾಗಿ ಗುರುತಿಸಿಕೊಂಡಿದ್ದಾರೆ.

ನವನಗರದ 69ನೇ ಸೆಕ್ಟರ್ ನಲ್ಲಿ ಬಾಡಿಗೆಗೆ ಪಡೆದಿರುವ ಗೃಹ ಕಚೇರಿಯ ಮೇಲೆ ಹುಬ್ಬಳ್ಳಿಯಿಂದ ಬಂದ ಆರು ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ.

ಕಚೇರಿಯಲ್ಲಿದ್ದ ವ್ಯವಸ್ಥಾಪಕ ಹಾಗೂ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಐಟಿ ಅಧಿಕಾರಿಗಳ ತಪಾಸಣೆ ವೇಳೆ ಆ ಮನೆಗೆ ಹೊರಗಿನವರು ಹೋಗದಂತೆ ಸ್ಥಳೀಯ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು