ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮಖಂಡಿ: ತಾಯಿ-ಮಗಳಿಗೆ ಕೊರೊನಾ ವೈರಸ್‌ ಸೋಂಕು ದೃಢ

Last Updated 27 ಏಪ್ರಿಲ್ 2020, 8:29 IST
ಅಕ್ಷರ ಗಾತ್ರ

ಬಾಗಲಕೋಟೆ: ಜಮಖಂಡಿಯಲ್ಲಿ ಸೋಮವಾರ ಮತ್ತಿಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ರೋಗಿ ಸಂಖ್ಯೆ 456 ಅವರ 32 ವರ್ಷದ ಪತ್ನಿ ಹಾಗೂ 12 ವರ್ಷದ ಮಗಳಿಗೆ ಸೋಂಕು ದೃಢಪಟ್ಟಿದೆ. ಇಬ್ಬರನ್ನೂ ಭಾನುವಾರ ಸಂಜೆಯೇ ಬಾಗಲಕೋಟೆಯ ಕೋವಿಡ್-19 ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕೆಮ್ಮು, ಜ್ವರ ಹಾಗೂ ನೆಗಡಿಯಿಂದ ಬಳಲುತ್ತಿದ್ದ ರೋಗಿ ಸಂಖ್ಯೆ 456 ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಾಗ ಅವರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿತ್ತು. ಅವರಿಗೆ ಶನಿವಾರ ಸೋಂಕು ದೃಢಪಟ್ಟಿತ್ತು.

ಹಳೆಯ ಬಾಗಲಕೋಟೆ, ಮುಧೋಳ, ಮುಧೋಳ ತಾಲ್ಲೂಕಿನ ಮುಗಳಖೋಡ ಹಾಗೂ ಜಮಖಂಡಿಯಲ್ಲಿ ಸೋಂಕಿತರು ಕಂಡುಬಂದಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಅವರಲ್ಲಿ 75 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ. ಆರು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT