ಜಮಖಂಡಿ: ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು, ಸಮಯಪಾಲನೆ ಹಾಗೂ ಗುರಿ ಸಾಧನೆಯ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ’ ಎಂದು ಗ್ರಾಮದ ಮುಖಂಡ ಶ್ರೀಶೈಲ ಬುದ್ನಿ ಹೇಳಿದರು.

ತಾಲ್ಲೂಕಿನ ಹುನ್ನೂರು ಗ್ರಾಮದ ಶ್ರೀ ಬನಶಂಕರಿ ದೇವಾಲಯದಲ್ಲಿ ಇತ್ತೀಚೆಗೆ ನಡೆದ ದೇವಾಂಗ ಸಮಾಜದ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಶ್ರಮ, ಆತ್ಮವಿಶ್ವಾಸ ಮತ್ತು ಶಿಸ್ತು ಇದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು. ಕರ್ನಾಟಕ ಅಚಿವರ್ಸ್ ಬುಕ್ ಆಫ್ ರೆಕಾರ್ಡ್ನಲ್ಲಿ ಸಾಧನೆ ಮಾಡಿದ ಶಿವಾನಿ.ಎಂ.ಹೊಳ್ಳೂರು ಸನ್ಮಾನಿಸಿದರು.

ವೇದಿಕೆ ಮೇಲೆ ರಾಮಪ್ಪ ಕಾಮಗೊಂಡ, ಶ್ರೀಶೈಲ ಕೋಳಿ, ಶಂಕರ ಮರೆಗುದ್ದಿ, ರುದ್ರಪ್ಪ ಕೋಲಾರ, ಈರಪ್ಪ ಹನಗಂಡಿ, ಸಿದ್ದಮಲ್ಲಪ್ಪ ಗಡೆಪ್ಪನವರ, ಕಾಡಪ್ಪ ಮರೆಗುದ್ದಿ, ಶ್ರೀಶೈಲ ಹನಗಂಡಿ, ರಾಜು ಕೋಲಾರ, ಚೇತನ ಕಾಮಗೊಂಡ, ವಿನಯ ಕೋಲಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-19-347018334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.