ಜಮಖಂಡಿ: ತಾಲ್ಲೂಕಿನ ಹಿಪ್ಪರಗಿ ಗ್ರಾಮದ ಕೃಷ್ಣಾ ನದಿಯಿಂದ ಮರಳನ್ನು ಅಕ್ರಮವಾಗಿ ತೆಗೆಯುತ್ತಿರುವ ಟ್ರ್ಯಾಕ್ಟರ್ ಎಂಜಿನ್ ಹಾಗೂ ಟ್ರೇಲರ್ ವಶಪಡಿಸಿ ಕೊಂಡು ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾತ್ರಿ ಸಮಯದಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಿರುವ ಮರಳನ್ನು ಅಧಿಕಾರಿಗಳು ವಶಪಡಿಸಿ ಕೊಂಡು ಸರ್ಕಾರಿ ಕಟ್ಟಡಗಳಿಗೆ ನೀಡಲು ಆದೇಶ ಮಾಡಿದ್ದಾರೆ.

ಉಪವಿಭಾಧಿಕಾರಿ ಶ್ವೇತಾ ಬೀಡಿಕರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ ಅನೀಲ ಬಡಿಗೇರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಮಾಚಕನೂರ, ಗ್ರಾಮೀಣ ಪಿ.ಎಸ್.ಐ ಗಂಗಾಧರ ಪೂಜಾರಿ, ತಾಲ್ಲೂಕು ಮರಳು ಉಸ್ತುವಾರಿ ಸಮಿತಿ ಸದಸ್ಯರ ವೀಕ್ಷಣಾ ದಳದ ತಂಡ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಭೆ ಮಾಡಿದ್ದು ತಾಲ್ಲೂಕಿನ ಮರಳು ತೆಗೆಯದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಹಿಪ್ಪರಗಿ ಗ್ರಾಮದಲ್ಲಿ ನದಿಯಿಂದ ಮರಳನ್ನು ಎತ್ತದಂತೆ ಒಂದು ಡಿಆರ್ ಪೊಲೀಸ್ ವಾಹನವನ್ನು ನಿಯೋಜನೆ ಮಾಡಲಾಗಿದೆ ಎಂದು ತಹಶೀಲ್ದಾರರ ಅನೀಲ ಬಡಿಗೇರ ತಿಳಿಸಿದರು.

ಕೊಳ್ಳೇಗಾಲ: ತಾಲ್ಲೂಕಿನ ಶಿವ ನಸಮುದ್ರದ ದರ್ಗಾದ ಕಾವೇರಿ ನದಿಯಲ್ಲಿ ಮಂಗಳವಾರ ಬೆಂಗಳೂರಿನ ಉಲ್ಲಾಳ ಬಡಾವಣೆ ಅನ್ಸರ್ ಪಾಷ (52) ಎಂಬವರು ಕಾಲು ಜಾರಿ ಬಿದ್ದು ಮೃತಪಟ್ಟರು. ಕುಟುಂಬ ಸಮೇತರಾಗಿ ದರ್ಗಾಕ್ಕೆ ಭೇಟಿ ನೀಡಿದ್ದು, ಬೆಳಿಗ್ಗೆ ಪೂಜೆ ಸಲ್ಲಿಸುವ ಸಲುವಾಗಿ ಸ್ನಾನ ಮಾಡಲು ನದಿ ಬಳಿ ತೆರಳಿದಾಗ ದುರ್ಘಟನೆ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-19-1463354621

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.