ಜಮಖಂಡಿ: ಅಂದಿನ ಕಾಂಗ್ರೆಸ್ ಅಭದ್ರತೆಯಿಂದ ಕಮ್ಯುನಿಸ್ಟರನ್ನು ನೆಚ್ಚಿ ಸ್ವಾತಂತ್ರ್ಯ ಹೋರಾಟಗಾರರನ್ನು ಪಠ್ಯದಿಂದ ಕೈಬಿಟ್ಟಿತ್ತು, ಚಂದ್ರಶೇಖರ ಆಜಾದ್, ಒನಕೆ ಓಬವ್ವ, ಮದಕರಿ ನಾಯಕ ಬಗ್ಗೆ ಪಠ್ಯಗಳಿರಲಿಲ್ಲ. ಅನೇಕ ದಶಕಗಳ ಹೋರಾಟದ ನಂತರ ಈಗ ಕೆಲವನ್ನು ಸೇರಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.

ಇಲ್ಲಿನ ಬಸವಭವನದಲ್ಲಿ ಮಂಗಳವಾರ ವೀರ ಸಾವರ್ಕರ್ ಪ್ರತಿಷ್ಠಾನ ವತಿಯಿಂದ 143ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ನೇತಾಜಿ ಸುಭಾಸ್ ಚಂದ್ರ ಬೋಸ್ ಹಾಗೂ ಸಾವರ್ಕರ್ ಅವರಿಗೆ ಕಾಂಗ್ರೆಸ್ ಬಹಳ ಅನ್ಯಾಯ ಮಾಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ವಕೀಲ ತಾತಾಸಾಹೇಬ ಬಾಂಗಿ, ಕೃಷ್ಣಾನಂದ ಅವಧೂತರು ಮಾತನಾಡಿದರು.ರಾಜ್ಯಸಭೆ ಸದಸ್ಯರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಆರ್ ಎಸ್ ಎಸ್ ಹಾಗೂ ಬಿಜೆಪಿ ಮುಖಂಡರು ಇದ್ದರು.

ಶ್ರೀಕರ ಸವಾಯಿ ಪ್ರಾರ್ಥನಾಗೀತೆ ಹಾಡಿದರು. ಅಜಯ ಕುಲಕರ್ಣಿ ಸ್ವಾಗತಿಸಿದರು. ಪ್ರತಿಷ್ಠಾನದ ಅಧ್ಯಕ್ಷ ಶೈಲೇಶ್ ಆಪ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಮಾರ ಹವಾಲ್ದಾರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-19-1984277533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.