ಜಮಖಂಡಿ: ಪ್ರಸಕ್ತ ಶೈಕ್ಷಣಿಕ ಸಾಲಿನ ಮೊದಲ ದಿನದಂದು ತರಗತಿಗೆ ಆಗಮಿಸಿದ ಮಕ್ಕಳ ಮುಖದಲ್ಲಿ ಮಂದಹಾಸವಿತ್ತು. ಶಿಕ್ಷಕರು, ಶಾಲಾ ಸುಧಾರಣಾ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಎಲ್ಲ ಮಕ್ಕಳಿಗೆ ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಪುಷ್ಪಾರ್ಚನೆ ಮಾಡಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು.

ತಾಲ್ಲೂಕಿನ ಕೊಣ್ಣೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ‘ಉತ್ತಮ ಕಲಿಕೆ ಉಜ್ವಲ ಭವಿಷ್ಯ’ ಎಂಬ ಸಂದೇಶದೊಂದಿಗೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಮೌನೇಶ್ವರ ಬಡಿಗೇರ ಮಾತನಾಡಿ, ‘ಇಂದಿನ ಸಮಾಜದಲ್ಲಿ ಉತ್ತಮ ಸಾಧನೆ ಮಾಡಿರುವ ಬಹುತೇಕರು ಕನ್ನಡ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದರು ಎಂಬುದೇ ಹೆಮ್ಮೆಯ ವಿಚಾರ. ಆ ನಿಟ್ಟಿನಲ್ಲಿ ಎಲ್ಲರೂ ಗುಣಮಟ್ಟದ ಶಿಕ್ಷಣ ಪಡೆದು ಸರ್ಕಾರದ ಎಲ್ಲ ಯೋಜನೆಗಳ ಸದುಪಯೋಗ ಪಡೆಯಬೇಕು’ ಎಂದರು.ಸಿಆರ್ಪಿ ಎಂ.ಐ. ಮಮದಾಪುರ ಮಾತನಾಡಿ, ‘ಶಾಲೆ ಎಂದರೆ ಕೇವಲ ಅಂಕಗಳನ್ನು ಗಳಿಸುವ ಜಾಗವಲ್ಲ. ಇಲ್ಲಿ ನಿಮ್ಮ ವ್ಯಕ್ತಿತ್ವ, ಉತ್ತಮ ಸಂಸ್ಕಾರ ಮತ್ತು ಪ್ರತಿಭೆಯನ್ನು ಅಭಿವ್ಯಕ್ತ ಪಡಿಸುವ ಪವಿತ್ರ ಸ್ಥಳ’ ಎಂದರು.

ನೂತನವಾಗಿ ಪ್ರಾರಂಭಗೊಳ್ಳಲಿರುವ ಎಲ್.ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಉದ್ಘಾಟಿಸಲಾಯಿತು. ಪಾಲಕ ಪೋಷಕರ ಸಭೆ ನಡೆಯಿತು. ಶಾಲೆಯ ಮುಖ್ಯದ್ವಾರಕ್ಕೆ ತೆಂಗಿನ ಗರಿ, ತಳಿರು–ತೋರಣಗಳಿಂದ ಸಿಂಗರಿಸಿದ್ದರು. ಗ್ರಾಮದ ಕರಿಸಿದ್ದೇಶ್ವರ ದೇವಸ್ಥಾನದಿಂದ ಶಾಲೆಯವರೆಗೆ ವಿದ್ಯಾ ಜ್ಯೋತಿ ನಡಿಗೆ ಜರುಗಿತು. ಮುಖ್ಯ ಶಿಕ್ಷಕಿ ಪಿ.ಎಚ್. ದುದಗಿ, ಶಿಕ್ಷಕ ದಾನಪ್ಪ ಕೋಹಳ್ಳಿ, ಸುಮಾ ಚಲವಾದಿ, ರೂಪಾ ಕುಂಚನೂರ, ವಿಜಯ ಮಡಿವಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-19-263388960

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.