ಜಮಖಂಡಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನು ಹಲ್ಲೆಗೈದು ಕೊಲೆ ಮಾಡಿದ ಘಟನೆ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ.

ಪತಿ ಮಲ್ಲಪ್ಪ ಅವರಿಂದ ಸೌಮ್ಯಾ (32) ಕೊಲೆಯಾದವರು.

‘ಜಮಖಂಡಿ ತಾಲ್ಲೂಕಿನ ನಾಗನೂರ ಗ್ರಾಮದ ಸೌಮ್ಯ ಹಾಗೂ ಮಲ್ಲಪ್ಪ 10 ವರ್ಷಗಳ ಹಿಂದೆ ಮದುವೆ ಆಗಿದ್ದರು. ತೊದಲಬಾಗಿ ಗ್ರಾಮದಲ್ಲಿ 9 ವರ್ಷದ ಮಗ, 7 ವರ್ಷದ ಮಗಳೊಂದಿಗೆ ವಾಸವಿದ್ದರು. ಪತ್ನಿಯ ಮೇಲೆ ಅಕ್ರಮ ಸಂಬಂಧದ ಅನುಮಾನ ಪಟ್ಟು ಹಲ್ಲೆಗೈದು ಕೊಲೆ ಮಾಡಿದ್ದಾನೆ. ಆರೋಪಿ ಮಲ್ಲಪ್ಪ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಮೂವರು ಸಹಚರರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-19-1690605660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.