ಜಮಖಂಡಿ: ನಗರದಲ್ಲಿ ಬಿಜೆಪಿ ಪದಾಧಿಕಾರಿಗಳ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ.

ಬುಧವಾರ ರಾತ್ರಿ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಸಂಗಮೇಶ ದಳವಾಯಿ ಹಾಗೂ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪವನ ಸಾಳೂಂಕಿ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ಜೋರಾಗಿ ಕೈ ಕೈ ಮಿಲಾಯಿಸಿದ್ದರು. ಅಷ್ಟರಲ್ಲಿ ಅಲ್ಲಿದ್ದ ಮುಖಂಡರು ಇಬ್ಬರನ್ನು ಸಮಾಧಾನ ಮಾಡಿ ಕಳುಹಿಸಿದ್ದರು.

ಸಂಗಮೇಶ ದಳವಾಯಿ ಹಾಗೂ ಅವರ ಜೊತೆಗೆ ಹೋಗಿದ್ದ ಕೆಲವರು ಗುರುವಾರ ಬೆಳಿಗ್ಗೆ ಪವನ ಸಾಳೂಂಕಿ ಮನೆಗೆ ಹೋಗಿ ಮಕ್ಕಳು, ಮಹಿಳೆಯರು ಸೇರಿದಂತೆ ಹಲವರ ಮೇಲೆ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿದ್ದ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.

ಪವನ ಸಾಳೂಂಕಿ ಸಹೋದರ ಕಿರಣ ಸಾಳೂಂಕಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಗಮೇಶ ದಳವಾಯಿ ಕಡೆಯವರೂ ಸಾವಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ದಾಖಲಾಗಿಲ್ಲ. ಹೊಡೆದಾಡಿಕೊಂಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-19-535366019

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.