ಜಮಖಂಡಿ: ನಗರದ ಹೊರವಲಯದಲ್ಲಿರುವ ಕಾರಾಗೃಹದಲ್ಲಿ ಕೈದಿಗಳ ನಡುವಿನ ಜಗಳ ಬಿಡಿಸಲು ಹೋದ ಜೈಲು ಅಧೀಕ್ಷಕ ವಿ.ಡಿ. ಕುಂಬಾರ ಮೇಲೆ ಕೈದಿಗಳು ಹಲ್ಲೆ ನಡೆಸಿದ್ದಾರೆ.

ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹಾಲಿಂಗಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಂಧಿತರಾಗಿದ್ದ ಜಾಕೀರ್ ಹುಸೇನ್ ಮಕಾಂದಾರ, ಫಯಾಜ್ ಮಕಾಂದಾರ, ಅಶೋಕ ನಾಯ್ಕೊಡಿ, ಅರ್ಫಾತ್ ತಾಳಿಕೋಟಿ ಎಂಬುವವರು ಹಲ್ಲೆ ಮಾಡಿದ್ದಾರೆ.

ಜೈಲರ ಎಡಗೈ ಮೂಳೆ ಮುರಿದಿದ್ದು, ಹಲವು ಕಡೆ ಪೆಟ್ಟು ಬಿದ್ದಿದ್ದು ಜಮಖಂಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.