ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜನಪ್ರಗತಿ ಸಹಕಾರ ಸಂಘ ಉದ್ಘಾಟನೆ ನಾಳೆ  

Published 10 ಜುಲೈ 2024, 18:36 IST
Last Updated 10 ಜುಲೈ 2024, 18:36 IST
ಅಕ್ಷರ ಗಾತ್ರ

ಗುಳೇದಗುಡ್ಡ: ಪಟ್ಟಣದಲ್ಲಿ ಜುಲೈ 12ರಂದು ಬೆಳಿಗ್ಗೆ 10ಕ್ಕೆ ಚೌ ಬಜಾರದ ಯಂಡಿಗೇರಿ ಬಿಲ್ಡಿಂಗ್ ನಲ್ಲಿ ಜನ ಪ್ರಗತಿ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ಜರುಗಲಿದೆ ಎಂದು ಅಧ್ಯಕ್ಷೆ ಮೇಘನಾ ಹುನಗುಂದ ತಿಳಿಸಿದ್ದಾರೆ.

ಪಟ್ಟಣದ ಗುರುಸಿದ್ದೇಶ್ವರ ಬ್ರಹನ್ಮಠದ ಬಸವರಾಜ ಪಟ್ಟದಾರ್ಯ ಸ್ವಾಮೀಜಿ, ಹಳೆ ಹುಬ್ಬಳ್ಳಿಯ ವೀರ ಭಿಕ್ಷಾವರ್ತಿ ನೀಲಕಂಠ ಮಠದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ, ಗುಳೇದಗುಡ್ಡ ಮುರುಘಾ ಮಠದ ಕಾಶಿನಾಥ ಸ್ವಾಮೀಜಿ, ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಕೋಟೆಕಲ್ ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಬಾಗಲಕೋಟೆ ಬಸವೇಶ್ವರ ಸಹಕಾರ ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಉದ್ಘಾಟಿಸುವರು. ಜನಪ್ರಗತಿ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ಮೇಘನಾ ಮುರುಗೇಶ್ ಹುನಗುಂದ ಅಧ್ಯಕ್ಷತೆ ವಹಿಸುವರು.

ಸಹಕಾರ ಭಾರತಿ ಅಧ್ಯಕ್ಷರಾದ ರಾಜಶೇಖರ್ ಶೀಲವಂತ, ನೆಹರೂ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಳೆಬಸು ಶೆಟ್ಟರ್, ಕೋಟೆಕಲ್ ಪಿಕೆಪಿಎಸ್ ಅಧ್ಯಕ್ಷ ಹನುಮಂತ ಮಾವಿನಮರ ಅತಿಥಿಗಳಾಗಿ ಆಗಮಿಸುವರು. ಸಹಕಾರ ಸಂಘದ ಸದಸ್ಯರು ಉಪಸ್ಥಿತರಿರುವರು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT