ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜೆಡಿಎಸ್–ಕಾಂಗ್ರೆಸ್ ಮೈತ್ರಿ ನಿಶ್ಚಿತ’

ಲೋಕಸಭೆ ಚುನಾವಣೆಯಲ್ಲಿ 18 ಸ್ಥಾನ ಬಂದರೆ ಪ್ರಧಾನಮಂತ್ರಿ ಸ್ಥಾನ: ಕೋನರಡ್ಡಿ ಅಭಿಮತ
Last Updated 8 ಜುಲೈ 2018, 11:35 IST
ಅಕ್ಷರ ಗಾತ್ರ

ಬಾಗಲಕೋಟೆ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್–ಕಾಂಗ್ರೆಸ್ ನಡುವೆ ಮೈತ್ರಿ ಶೇ 100ರಷ್ಟು ಖಚಿತ. ಮೈತ್ರಿಕೂಟಕ್ಕೆ 18 ಸ್ಥಾನ ಬಂದರೆ ಕರ್ನಾಟಕಕ್ಕೆ ಪ್ರಧಾನಿ ಸ್ಥಾನ ಸಿಗಬಹುದು ಎಂದು ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.

ನಗರದಲ್ಲಿ ಭಾನುವಾರ ಜೆಡಿಎಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದರು. ‘ಸಾಲ ಮನ್ನಾ ವಿಚಾರದಲ್ಲಿ ಅಪಪ್ರಚಾರ ನಡೆಯುತ್ತಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಿಜೆಪಿಯವರು ಹೇಳಿದರೆಂದು ಸಾಲಮನ್ನಾ ಮಾಡಿಲ್ಲ. ಬದಲಿಗೆ ರೈತರನ್ನು ಕೇಳಿ ಮಾಡಿದ್ದಾರೆ. 100 ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸಬಹುದು ಎಂದು ನಂಬಿರುವ ಬಿಜೆಪಿ ರೈತರ ಸಾಲ ಮನ್ನಾ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಅದಕ್ಕೆ ಸಾಮಾಜಿಕ ಜಾಲ ತಾಣವನ್ನು ವ್ಯವಸ್ಥಿತವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮುಂಬೈ ಹಾಗೂ ಹೈದರಾಬಾದ್ ಕರ್ನಾಟಕ ಭಾಗದ ರೈತರೇ ರಾಜ್ಯದಲ್ಲಿ ಹೆಚ್ಚು ಕೃಷಿ ಭೂಮಿ ಹೊಂದಿದ್ದಾರೆ. ಸಾಲ ಮನ್ನಾದ ಉಪಯೋಗ ಅವರಿಗೆ ಹೆಚ್ಚು ದೊರೆಯಲಿದೆ. ಹಾಗಿದ್ದರೂ ಹಳೇ ಮೈಸೂರು ಭಾಗದ ಒಕ್ಕಲಿಗರಿಗೆ ಮಾತ್ರ ಲಾಭ ಆಗಲಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ರೈತರನ್ನು ತಪ್ಪು ದಾರಿಗೆಳೆಯುವವರ ವಿರುದ್ಧ ದೂರು ದಾಖಲಿಸಲೂ ನಿರ್ಧರಿಸಲಾಗಿದೆ’ ಎಂದು ಕೋನರಡ್ಡಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT