ಬಾಗಲಕೋಟೆ: ‘ಜಾತ್ಯತೀತ ಜನತಾ ದಳ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಹನನಂತ ಮಾವಿನಮರದ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೆ.26ರಂದು ಮದ್ಯಾಹ್ನ 1ಕ್ಕೆ ಕಲಾಭವನದಲ್ಲಿ ನೋಂದಣಿಗೆ ಚಾಲನೆ ಸಿಗಲಿದೆ’ ಎಂದರು.
‘ಶಾಸಕ ಜಿ.ಟಿ. ದೇವೇಗೌಡ, ಸುರೇಶ ಬಾಬು, ವಿಧಾನ ಪರಿಷತ್ ಸದಸ್ಯ ಶರವಣ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಪ್ರತಿ ಮತಗಟ್ಟೆಗೆ 15 ಜನರಂತೆ ಸದಸ್ಯರನ್ನಾಗಿ ಮಾಡಲಾಗುವುದು. ಜಿಲ್ಲೆಯಲ್ಲಿ ಒಟ್ಟು 25 ರಿಂದ 30 ಸಾವಿರ ಜನರನ್ನು ಹೊಸ ಸದಸ್ಯರನ್ನಾಗಿ ಮಾಡಲಾಗುವುದು. ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ’ ಎಂದರು.