ಮಂಗಳವಾರ, ಮಾರ್ಚ್ 2, 2021
18 °C
ಶೀಘ್ರ ದೆಹಲಿಗೆ ರಾಜ್ಯದ ಸಂಸದರ ನಿಯೋಗ

ಕಾಳಿ ನದಿ ನೀರು ಮಲಪ್ರಭೆಗೆ ಸೇರ್ಪಡೆ: ಮುರುಗೇಶ ನಿರಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಕಾಳಿ ನದಿ ನೀರನ್ನು ಮಲಪ್ರಭಾ ನದಿಗೆ ಸೇರಿಸಿ ಬಯಲು ಸೀಮೆಯ ಆರು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿ ವ್ಯವಸ್ಥೆ ಮಾಡುವ ₹6 ಸಾವಿರ ಕೋಟಿ ಮೊತ್ತದ ಯೋಜನೆಗೆ ಕೇಂದ್ರದಿಂದ ಅನುಮತಿ ಪಡೆಯಲು ಶೀಘ್ರ ರಾಜ್ಯದ ಸಂಸದರ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಸಚಿವ ಮುರುಗೇಶ ಆರ್.ನಿರಾಣಿ ಹೇಳಿದರು.

ಬಾದಾಮಿ ತಾಲ್ಲೂಕಿನ ಕೆರಕಲಮಟ್ಟಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆ ಸುಪಾ ಜಲಾಶಯದ ಮೂಲಕ ಹರಿದು ವ್ಯರ್ಥವಾಗಿ ಸಮುದ್ರ ಸೇರುವ 140 ಟಿಎಂಸಿ ಅಡಿ ನೀರನ್ನು ಬಳಕೆ ಮಾಡಿಕೊಳ್ಳಲು 35 ಕಿ.ಮೀ ದೂರದ ಪೈಪ್‌ಲೈನ್‌ ಹಾಗೂ ಗುರುತ್ವ ಬಲದಿಂದ ಮಲಪ್ರಭಾ ನದಿಗೆ ತಿರುಗಿಸುವ ಯೋಜನಾ ವರದಿಯನ್ನು ಮುಧೋಳದ ನಿರಾಣಿ ಫೌಂಡೇಷನ್ ಸಿದ್ಧಪಡಿಸಿದೆ. ಅದರ ಪ್ರಸ್ತಾವನೆ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯಕ್ಕೆ ಈಗಾಗಲೇ ಸಲ್ಲಿಸಲಾಗಿದೆ ಎಂದರು.

ಈ ಬಗ್ಗೆ ರಾಜ್ಯದ 28 ಸಂಸದರೊಂದಿಗೂ ಚರ್ಚಿಸಲಾಗುವುದು ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು