ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಧಾನಸಭಾ ಚುನಾವಣೆ: ಮುಂದುವರಿದ ಬಾದಾಮಿ ಅಭ್ಯರ್ಥಿ ಕುತೂಹಲ

Last Updated 25 ಮಾರ್ಚ್ 2023, 8:56 IST
ಅಕ್ಷರ ಗಾತ್ರ

ಬಾಗಲಕೋಟೆ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಎರಡು ಕ್ಷೇತ್ರಗಳಿಗೆ ಹೆಸರು ಘೋಷಿಸಲಾಗಿದೆ.

ಜಮಖಂಡಿ ಕ್ಷೇತ್ರದಿಂದ ಹಾಲಿ ಶಾಸಕ ಆನಂದ ನ್ಯಾಮಗೌಡ ಅವರಿಗೆ ಮತ್ತೆ ಟಿಕೆಟ್‌ ನೀಡಲಾಗಿದೆ. ಹುನಗುಂದ ಕ್ಷೇತ್ರದಿಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅಭ್ಯರ್ಥಿಯಾಗಿದ್ದಾರೆ.

ರಾಜ್ಯದಲ್ಲಿ ಬಹುಚರ್ಚಿತ ವಿಧಾನಸಭಾ ಕ್ಷೇತ್ರ, ಹಾಲಿ ಶಾಸಕ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದಿರುವುದು ಚರ್ಚೆಗೆ ಕಾರಣವಾಗಿದೆ.

ಸಿದ್ದರಾಮಯ್ಯ ಹೆಸರನ್ನು ವರುಣಾ ಕ್ಷೇತ್ರಕ್ಕೆ ಘೋಷಿಸಿರುವುದರಿಂದ ಬಾದಾಮಿ ಕ್ಷೇತ್ರಕ್ಕೂ ಹೆಸರು ಘೋಷಣೆ ಮಾಡಬೇಕಿತ್ತು ಎಂಬುದು ಸ್ಥಳೀಯ ಕಾಂಗ್ರೆಸ್‌ ನಾಯಕರ ಅನಿಸಿಕೆ.

ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಜನಾಗ್ರಹದ ವಿಷಯವನ್ನು ಕಾಂಗ್ರೆಸ್‌ ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿರುವುದರಿಂದ ಬಾದಾಮಿಯಿಂದಲೂ ಸ್ಪರ್ಧಿಸಬಹುದು ಎಂಬ ಚರ್ಚೆಗೆ ಮುಂದುವರೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT