ಬಾಗಲಕೋಟೆ: ಬಿಜೆಪಿ ಸರ್ಕಾರದ ಕೊನೆ ಆರು ತಿಂಗಳ ಆಡಳಿತಾವಧಿಯಲ್ಲಿ ಕರೆದ ಟೆಂಡರ್ ರದ್ದು ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಗುರುವಾರ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಹಗರಣಗಳ ತನಿಖೆಗೆ ಆಯೋಗ ರಚನೆ ಮಾಡಲಾಗುವುದು. ತಪ್ಪಿತಸ್ಥರು ಎಷ್ಟೇ ದೊಡ್ಡವರಿರಲಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಶೇ 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಒಂದೂವರೆ ವರ್ಷವಾಯಿತು. ಆದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರದಲ್ಲಿಯೂ ಹಗರಣ ನಡಿದಿವೆ ಎನ್ನುತ್ತಾರೆ. 2008 ರಿಂದ ಇಲ್ಲಿಯವರೆಗಿನ ಆರೋಪಗಳ ಬಗ್ಗೆ ತನಿಖೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ಬಿಜೆಪಿ ಸರ್ಕಾರದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಗೂಳಿಹಟ್ಟಿ ಶೇಖರ, ಎಚ್. ವಿಶ್ವನಾಥ ಅವರೇ ಆರೋಪ ಮಾಡುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನನ್ನ ರಾಜಕೀಯದಲ್ಲಿ ಜೀವನದಲ್ಲಿಯೇ ನೋಡಿಲ್ಲ ಎಂದು ಟೀಕಿಸಿದರು.

ಇವನ್ನೂ ಓದಿ...

* ಅಧಿಕಾರಕ್ಕೆ ಬಂದೇ ಬರುತ್ತೇವೆ: ಎಲ್ಲ ಟೆಂಡರ್ ರದ್ದು ಮಾಡುತ್ತೇವೆ– ಡಿಕೆಶಿ

* ಸೂಟ್ ಕೇಸ್ ತಲುಪಿಸದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ ಎಚ್ಡಿಕೆ: ಬಿಜೆಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.