ಮಂಗಳವಾರ, ಆಗಸ್ಟ್ 20, 2019
21 °C
ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊರೆ

ಯುಕೆಪಿ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ

Published:
Updated:
Prajavani

ಬಾಗಲಕೋಟೆ: ‘ಆಲಮಟ್ಟಿ ಅಣೆಕಟ್ಟೆಯ ಎತ್ತರ ಈಗಿರುವ 519.60 ಮೀಟರ್‌ನಿಂದ 524.26 ಮೀಟರ್‌ಗೆ ಎತ್ತರಿಸಲು ಕೇಂದ್ರ ಸರ್ಕಾರ ನೆರವಾಗಬೇಕು. ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಕೃಷ್ಣಾ ಮೇಲ್ದಂಡೆಯನ್ನು (ಯುಕೆಪಿ) ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕು‘ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.

ಪ್ರವಾಹಪೀಡಿತ ಜಮಖಂಡಿ, ಮುಧೋಳ ಹಾಗೂ ಹುನಗುಂದ ತಾಲ್ಲೂಕುಗಳಲ್ಲಿ ಶುಕ್ರವಾರ ವೈಮಾನಿಕ ಸಮೀಕ್ಷೆ ನಡೆಸಿದ ಅವರು, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪದೇ ಪದೇ ಪ್ರವಾಹದ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸಲು ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಬೇಕಿದೆ. ಅದಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಆದರೆ ಕೇಂದ್ರ ಸರ್ಕಾರ ಆರ್ಥಿಕ ಸಹಾಯ ಮಾಡಬೇಕು ಎಂದರು.

₹100 ಕೋಟಿ ಬಿಡುಗಡೆ: ರಾಜ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಹೆಚ್ಚುವರಿಯಾಗಿ ₹100 ಕೋಟಿ ಬಿಡುಗಡೆ ಮಾಡಲಾಗಿದೆ. ಶನಿವಾರ ಸಂಜೆ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ಕರೆದಿದ್ದು, ಅಗತ್ಯಬಿದ್ದಲ್ಲಿ ಇನ್ನಷ್ಟು ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

‘ರಾಜ್ಯದಲ್ಲಿನ ಸಂಕಷ್ಟ ಪರಿಸ್ಥಿತಿಯ ಬಗ್ಗೆ ಕೇಂದ್ರದೊಂದಿಗೂ ನಿರಂತರ ಸಂಪರ್ಕ ಇಟ್ಟುಕೊಂಡಿರುವೆ. ಪ್ರಧಾನಿ ಹಾಗೂ ಕೇಂದ್ರ ಗೃಹಸಚಿವರಿಗೆ ಇಲ್ಲಿನ ಪರಿಸ್ಥಿತಿ ಮನವರಿಕೆ ಮಾಡಿಕೊಡುತ್ತಿರುವೆ. ಎಲ್ಲ ರೀತಿಯ ಸಹಾಯ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ‘ ಎಂದು ಹೇಳಿದ ‘ಯಡಿಯೂರಪ್ಪ, ನಾನು ಏಕಾಂಗಿ ಅಲ್ಲ. ಹಾಗೆ ಅನ್ನಿಸುತ್ತಿಲ್ಲ‘ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Post Comments (+)