ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಭೈರತಿ ಬಸವರಾಜ

Last Updated 7 ಸೆಪ್ಟೆಂಬರ್ 2020, 10:31 IST
ಅಕ್ಷರ ಗಾತ್ರ

ಬಾಗಲಕೋಟೆ:ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.

ಡ್ರಗ್ಸ್ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳ ಮೇಲೆ ಸಚಿವರೊಬ್ಬರು ಪ್ರಭಾವ ಬೀರುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಭೈರತಿ ಬಸವರಾಜ ಮೇಲಿನಂತೆ ಪ್ರತಿಕ್ರಿಯಿಸಿದರು.

ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂದೇಟು ಹಾಕುವುದಿಲ್ಲ. ಈಗಾಗಲೇ ಗೃಹ ಸಚಿವರು ಈ ಬಗ್ಗೆ ಎಲ್ಲಾ ಕ್ರಮ ಕೈಗೊಂಡು, ಮಾಹಿತಿ ಕೊಟ್ಟಿದ್ದಾರೆ. ನಮ್ಮ ಮುಖ್ಯಮಂತ್ರಿಗಳು ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಿದ್ದಾರೆ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಪರಮಾಧಿಕಾರ. ಅವರ ವಿವೇಚನೆಗೆ ಬಿಟ್ಟಿದ್ದು. ಸಿಎಂ ನಿರ್ಧಾರಕ್ಕೆ ನಾವೆಲ್ಲ ಬದ್ಧ. ನಮ್ಮ ಜೊತೆ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಡಬಹುದು, ಕೊಡದೇ ಇರಬಹುದು ಎಂದ ಭೈರತಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಅದು ಸಿಎಂ ನಿರ್ಧಾರಕ್ಕೆ ಬಿಟ್ಟಿದ್ದು,ಅವ್ರು ಏನೇ ತೀರ್ಮಾನ ತೆಗೆದುಕೊಂಡ್ರು ನಾವು ಬದ್ಧ ಎಂದರು.

ಪರಿಶಿಷ್ಟ ಪಂಗಡದವರಿಗೆ ಶೇ 7.5 ಮೀಸಲಾತಿ ಕೊಡುವ ವಿಚಾರ ಮುಖ್ಯಮಂತ್ರಿ ತೀರ್ಮಾನ ಮಾಡ್ತಾರೆ. ಪ್ರಸನ್ನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದೆ. ಸಂಪುಟ ಸಹೋದ್ಯೋಗಿಗಳು, ಆ ಸಮುದಾಯ ಸಚಿವರು ಸೇರಿ ಸಾಧಕ ಬಾಧಕ ಚರ್ಚೆ ಮಾಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT