ಶುಕ್ರವಾರ, ಮೇ 20, 2022
19 °C

ವಿಜಯಾನಂದ ಕಾಶಪ್ಪನವರ ನಿವಾಸಕ್ಕೆ ತಡರಾತ್ರಿ ಮಾಜಿ ಸಚಿವ ವಿನಯ ಕುಲಕರ್ಣಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ  ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ತಡರಾತ್ರಿ ಇಳಕಲ್ ನಗರದಲ್ಲಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರ ಮನೆಗೆ ಭೇಟಿ ನೀಡಿದ್ದರು.

ಅಲ್ಲಿ ಅಲ್ಪೋಪಹಾರ ಸೇವಿಸಿದ ನಂತರ ಕೆಲಹೊತ್ತು ವಿಜಯಾನಂದ ಅವರೊಂದಿಗೆ ಚರ್ಚಿಸಿದರು. ವಿಜಯಾನಂದ ಪತ್ನಿ ವೀಣಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ನಂತರ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಓದಿ: 

ವಿಜಯಾನಂದ ಕಾಶಪ್ಪನವರ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದಾರೆ.

ಅದಕ್ಕೂ ಮುನ್ನ ಮುಧೋಳ ತಾಲ್ಲೂಕಿನ ಲೋಕಾಪೂರದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ, ಕೋವಿಡ್‌ನಿಂದ ಇತ್ತೀಚೆಗೆ ಸಾವಿಗೀಡಾದ ಮಹಾಂತೇಶ ಉದಪುಡಿ ಅವರ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು