ಕೆರೂರ: ‘2027ರ ಜನಗಣತಿಯು ಸಂಪೂರ್ಣ ಡಿಜಿಟಲ್ ಆಧಾರಿತವಾಗಿದೆ. ಜನಗಣತಿ ಮಾಹಿತಿಯು ದೋಷ ಮುಕ್ತ ಹಾಗೂ ಪಾರದರ್ಶಕತೆಯಿಂದ ಕೂಡಿರಬೇಕು’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ ಮಾಡಬಾಳ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 2027 ಜನಗಣತಿಯ ಗಣತಿದಾರರ ಹಾಗೂ ಮೇಲ್ವಿಚಾರಕ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗಣತಿದಾರರಿಗೆ ಮೂರು ಹಂತಗಳಲ್ಲಿ ತರಬೇತಿ ನಡೆಯಲಿದ್ದು, ತರಬೇತಿಯಲ್ಲಿ ಗಣತಿದಾರರಿಗೆ ಪಾರದರ್ಶಕತೆ ಹಾಗೂ ಮಾಹಿತಿ ದೋಷ ಮುಕ್ತವಾಗಿಡುವ ಬಗ್ಗೆ ಮಾಹಿತಿ ನೀಡಲಾಗುವುದು’ ಎಂದು ಹೇಳಿದರು.

‘ಸಾರ್ವನಿಕರು ಮನೆಯಲ್ಲಿಯೇ ಕುಳಿತು ಸ್ವಯಂ ಪ್ರೇರಿತರಾಗಿ ಆನ್ಲೈನ್ನಲ್ಲಿ ಮಾಹಿತಿ ನೀಡಬಹುದು. ಪಟ್ಟಣದ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 38 ಬ್ಲಾಕ್ಗಳಿದ್ದು, 38 ಗಣತಿದಾರರು, 7 ಮೇಲ್ವಿಚಾರಕರು ಇದ್ದಾರೆ. ಕೆರೂರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 45 ಗಣತಿದಾರರನ್ನು ನೇಮಿಸಲಾಗಿದೆ’ ಎಂದು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜೀನ ಪರಶುರಾಮ ಲಮಾಣಿ, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಮಹಾಂತೇಶ ಅಣ್ಣೆನ್ನವರ, ಅಶ್ವತ್ಥ್ ರಂಗನಗೌಡ್ರ ಹಾಗೂ ಗಣತಿದಾರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-19-1772527915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.