ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಟಿಕಲ್ ಪಿಕೆಪಿಎಸ್: ವಾರ್ಷಿಕ ಸಾಮಾನ್ಯ ಸಭೆ ನಾಳೆ

Published : 8 ಸೆಪ್ಟೆಂಬರ್ 2024, 13:52 IST
Last Updated : 8 ಸೆಪ್ಟೆಂಬರ್ 2024, 13:52 IST
ಫಾಲೋ ಮಾಡಿ
Comments

ಗುಳೇದಗುಡ್ಡ: ‘2023-24ನೇ ಸಾಲಿನಲ್ಲಿ ಸಂಘವು ₹8 ಕೋಟಿ ಲಾಭ ಗಳಿಸಿದೆ’ ಎಂದು ಕೋಟಿಕಲ್ ಪಿಕೆಪಿಎಸ್ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.

ಸಂಘದ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೈತರಿಗೆ ಶೇ 12ರಷ್ಟು  ಡಿವಿಡೆಂಡ್ ನೀಡುತ್ತಾ ಬಂದಿದ್ದು, ರೈತರ ಉತ್ಪನ್ನಗಳನ್ನು ಸುರಕ್ಷಿತವಾಗಿಡಲು ದೊಡ್ಡ ಪ್ರಮಾಣದ ದಾಸ್ತಾನು ನಿರ್ಮಾಣ ಕೊನೆಯ ಹಂತಕ್ಕೆ ಬಂದಿದೆ ಎಂದರು.

ವಾರ್ಷಿಕ ಸಭೆ ನಾಳೆ: 2023-24ನೇ ಸಾಲಿನ ವಾರ್ಷಿಕ ಸರ್ವಾ ಸಾಧಾರಣ ಸಭೆಯು ಸೆ.9 ರಂದು  ಬೆಳಿಗ್ಗೆ 11 ಗಂಟೆಗೆ ಕೋಟೆಕಲ್ ಹೊಳೆ ಹುಚ್ಚೇಶ್ವರ ಮಠದ ಆವರಣದಲ್ಲಿ ಸಂಘದ ಅಧ್ಯಕ್ಷ ಹನಮಂತ ಮಾವಿನಮರದ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ತಿಳಿಸಿದರು.

ನಿರ್ದೇಶಕರಾದ ಯಲಗುರ್ದಪ್ಪ ತೊದಲಂಗಿ,ಸಂಗಪ್ಪ ಹಡಪದ,ಮಹಾಗುಂಡಪ್ಪ ಸುಂಕದ,ಸಂತೋಷ ತಿಪ್ಪಾ,ಪ್ರಕಾಶ ಕಳ್ಳಿಗುಡ್ಡ ಮತ್ತು ಮುಖ್ಯ ಕಾರ್ಯನಿರ್ವಾಹಕ ಚಂದ್ರಮೋಹನ ಕಲ್ಯಾಣಿ ಇದ್ದರು.

ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ 27ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಬ್ಯಾಂಕಿನ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಗೌರವಿಸಲಾಯಿತು
ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ 27ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಬ್ಯಾಂಕಿನ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಗೌರವಿಸಲಾಯಿತು

‘ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್‌ ಬೆಳ್ಳಿ ಮಹೋತ್ಸವ ಶೀಘ್ರ’:

‘ಶೀಘ್ರದಲ್ಲೇ ನಡೆಯಲಿರುವ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ ಬೆಳ್ಳಿ ಮಹೋತ್ಸವ ಆಚರಣೆ ಸಹಕಾರಿ ಕ್ಷೇತ್ರದಲ್ಲೇ ಅದ್ವಿತೀಯ ಕಾರ್ಯಕ್ರಮವಾಗಬೇಕು’ ಎಂದು ಬ್ಯಾಂಕ್ ನ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು. ಸ್ಥಳೀಯ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆದ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್‌ನ 27ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸಹಕಾರಿ ಸಂಘವು 1997ರಲ್ಲಿ ಆರಂಭಗೊಂಡಿದ್ದು ಇಂದು ₹8.26 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ಪ್ರಧಾನ ಕಚೇರಿ ಸಹಿತ 18 ಶಾಖೆಗಳನ್ನು ಹೊಂದಿದೆ. ₹ 2.65 ಕೋಟಿ ಲಾಭಗಳಿಸಿದೆ’ ಎಂದು ಹೇಳಿದರು. ಬ್ಯಾಂಕ್‍ನ ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಬ್ಬಂದಿಗೆ ತರಬೇತಿ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಏರ್ಪಡಿಸಲಾಗುತ್ತಿದೆ ಎಂದರು. ಶೈಕ್ಷಣಿಕ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬ್ಯಾಂಕಿನ ಸದಸ್ಯರ ಮಕ್ಕಳನ್ನು ಹಾಗೂ ಬ್ಯಾಂಕಿನ ಉತ್ತಮ ಗ್ರಾಹಕರನ್ನು ಗೌರವಿಸಲಾಯಿತು. ಪ್ರಧಾನ ವ್ಯವಸ್ಥಾಪಕ ಎಲ್.ಬಿ. ಕುರ್ತಕೋಟಿ ಸ್ವಾಗತಿಸಿ ವರದಿ ವಾಚನ ಮಾಡಿದರು. ಗುರುರಾಜ ಲೂತಿ ನಿರೂಪಿಸಿದರು. ಉಪಾಧ್ಯಕ್ಷ ಎಸ್.ಆರ್.ಮೇಲ್ನಾಡ ನಿರ್ದೇಶಕರಾದ ಎಚ್.ಎ.ಕೊಪ್ಪಳ ಕೆ.ಎಸ್ ಪತ್ರಿ ಎನ್.ಎನ್.ಪಾಟಿಲ್ ವಿ.ಪಿ.ಆಯಾಚಿತ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT