ಹುನಗುಂದ: 2023-24ನೆ ಸಾಲಿನಲ್ಲಿ ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು ಪ್ಯಾಕೇಜ್ ಮಾದರಿಯಲ್ಲಿ ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸಲ್/ ಪೆಟ್ರೋಲ್ ಪಂಪಸೆಟ್ / ಸೋಲಾರ್ ಪಂಪಸೆಟ್, ಲಘು ನೀರಾವರಿ ಘಟಕ ಹಾಗೂ ತಂತಿಬೇಲಿ ಒಳಗೊಂಡಂತೆ ಅನುಷ್ಠಾನಗೊಳಿಸಲಾಗುತ್ತಿದೆ.

ಉಭಯ ತಾಲ್ಲೂಕಿನ ಹೋಬಳಿಗಳಾದ ಹುನಗುಂದ 18, ಇಳಕಲ್ 18, ಕರಡಿ 18, ಅಮೀನಗಡ 6 ಕೃಷಿ ಹೊಂಡಗಳು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸುತ್ತಿದ್ದು, ಆಸಕ್ತ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ನಿಗದಿತ ನಮೂನೆಯಲ್ಲಿ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಲು ಕೋರಿದೆ.

ಅರ್ಜಿ ಸಲ್ಲಿಸಲು ಜನವರಿ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು ಎಂದು ಪ್ರಭಾರ ಸಹಾಯಕ ಕೃಷಿ ನಿರ್ದೇಶಕ ಬಸವರಾಜ ಟಕ್ಕಳಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.