ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಲು ಸರ್ಕಾರ ಸಿದ್ಧವಿದೆ. ಅಗತ್ಯ ಹಣವನ್ನು ಸಾಲ ಮಾಡಿಯಾದರೂ ನೀಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ನಲ್ಲಿ ಅನುದಾನ ನೀಡಲಾಗಿದೆ. ಪೂರಕ ಬಜೆಟ್ನಲ್ಲಿಯೂ ನೀಡಲಾಗುವುದು. ಯೋಜನೆ ಪೂರ್ಣಗೊಳಿಸಲಾಗುವುದು. ಯುಕೆಪಿಗೆ ಹಿಂದಿನ ಅವಧಿಯಲ್ಲಿ ₹57 ಸಾವಿರ ಕೋಟಿ ಖರ್ಚು ಮಾಡಲಾಗಿದೆ ಎಂದರು.

ನೀರಾವರಿ ಸಚಿವರಾಗಿದ್ದಾಗ ಬಾಗಲಕೋಟೆಗೆ ನೀಡಿದ ಅನುದಾನ ಕೊಟ್ಟಿರುವ ಹಾಗೂ ನೀರು ಹಂಚಿಕೆಯಲ್ಲಿ ಬಾಗಲಕೋಟೆಗೆ ಆಗಿರುವ ಅನ್ಯಾಯ ಕುರಿತ ಪ್ರಶ್ನೆಗಳಿಗೆ, ಸಾಕಷ್ಟು ಅನುದಾನ ಕೊಟ್ಟಿದ್ದೇನೆ. ಸದ್ಯಕ್ಕೆ ಮಾಹಿತಿ ಇಲ್ಲ ಎಂದರು. ಯುಕೆಪಿ ಕುರಿತ ಬಿಜೆಪಿ ನಾಯಕರ ಆರೋಪದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ ಎಂದು ಸವಾಲು ಹಾಕಿದರು.

ಉತ್ತರ ಕರ್ನಾಟಕದ ಕಡೆಗೆ ಕೈಗಾರಿಕೆಗಳನ್ನು ತರುವ ಕೆಲಸ ಆಗುತ್ತಿದೆ. ಬಾಗಲಕೋಟೆ, ವಿಜಯಪುರಕ್ಕೂ ಕೈಗಾರಿಕೆಗಳು ಬರಲಿವೆ. ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ತೆಗೆದುಕೊಂಡು ಕಾರ್ಖಾನೆ ಆರಂಭಿಸದವರಿಗೆ ನೋಟಿಸ್ ನೀಡಲಾಗುತ್ತಿದೆ. ಬಾಗಲಕೋಟೆಯಲ್ಲಿಯೂ ನೀಡಲಾಗಿದೆ ಎಂದು ಹೇಳಿದರು.

ಬಿಜೆಪಿಗೆ ನಾಯಕತ್ವ ಇಲ್ಲ. ಅಲ್ಲಿ ಹಲವು ಗುಂಪುಗಳಾಗಿವೆ. ಉಪಚುನಾವಣೆಗಳಲ್ಲಿ ಮಾತ್ರವಲ್ಲ, 2028ರ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಾಲ್ಕು ವರ್ಷಗಳಲ್ಲಿ ಬಿಜೆಪಿ ಮೂವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ಹಣ ತೆಗೆದಿರಿಸದೇ ಲಕ್ಷಾಂತರ ಕೋಟಿ ರೂಪಾಯಿ ಮೊತ್ತದ ಟೆಂಡರ್ ಕರೆಯುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿತ್ತು. ಆ ಬಾಕಿ ತೀರಿಸುವುದರ ಜೊತೆಗೆ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ಅಭಿವೃದ್ಧಿ ಕಾರ್ಯಗಳನ್ನೂ ಮಾಡುತ್ತಿದ್ದೇವೆ ಎಂದರು.

ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುವರು, ಆಧಾರ್ ಪ್ರಶ್ನಿಸಿದವರು, ಆಧಾರ್ ಅನ್ನೇ ಎಲ್ಲದಕ್ಕೂ ದಾಖಲೆ ಮಾಡಿಕೊಂಡಿದ್ದಾರೆ. ಅದೇ ನರೇಗಾ ಯೋಜನೆಯನ್ನು ಮುಂದುವರೆಸಿದ್ದಾರೆ. ಹಸಿರು ಕ್ರಾಂತಿ, ಬ್ಯಾಂಕ್ ರಾಷ್ಟ್ರೀಕರಣ, ಎಚ್ಎಎಲ್, ಬಿಎಚ್ಎಲ್, ಇಸ್ರೊ ಸೇರಿದಂತೆ ಹಲವು ಕಾರ್ಯಗಳನ್ನು ಕಾಂಗ್ರೆಸ್ ಮಾಡಿದೆ ಎಂದು ಹೇಳಿದರು.

ಡಾಲರ್ ಬೆಲೆ ಹೆಚ್ಚಾದಾಗ, ಬೆಲೆ ಏರಿಕೆಯಾದಾಗ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡುತ್ತಿದ್ದರು. ಅಚ್ಚೆ ದಿನ್ ಆಯಂಗೆ ಎನ್ನುತ್ತಿದ್ದರು. ಸಿಲಿಂಡರ್ ಬೆಲೆ ಹೆಚ್ಚಳ, ಪೆಟ್ರೋಲ್ ಬೆಲೆ ನೂರರ ಗಡಿ ದಾಟಿಸಿರುವುದು ಒಳ್ಳೆಯ ದಿನಗಳೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಆಡಳಿತವಿದ್ದಾಗ ರೈತರ ₹70 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿತ್ತು. ಮೋದಿ ಅವರು ಲಕ್ಷಾಂತರ ಕೋಟಿ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ. ಇದು ಅವರ ಆಡಳಿತ ಎಂದು ಟೀಕಿಸಿದರು

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಅಜಯಕುಮಾರ ಸರನಾಯಕ, ಆನಂದ ನ್ಯಾಮಗೌಡ, ನಾಗರಾಜ ಹದ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-19-2128583561

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.