ಭಾನುವಾರ, ಜುಲೈ 25, 2021
25 °C

ಬಾಗಲಕೋಟೆ ಎಪಿಎಂಸಿ | ಕೃಷ್ಣಪ್ಪ ಅಧ್ಯಕ್ಷ, ಶಿವಮ್ಮ ಮೇಟಿ ಉಪಾಧ್ಯಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸೋಮವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದರು.

ಎಪಿಎಂಸಿ ಅಧ್ಯಕ್ಷರಾಗಿ ಕೃಷ್ಣಪ್ಪ ಲಮಾಣಿ ಚುನಾವಣೆಯಲ್ಲಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಶಿವಮ್ಮ ಮೇಟಿ ಅವಿರೋಧವಾಗಿ ಆಯ್ಕೆಯಾದರು. ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣಪ್ಪ ಲಮಾಣಿ, ಉಪಾಧ್ಯಕ್ಷೆ ಶಿವಮ್ಮ ಮೇಟಿ ಅವರನ್ನು ಶಾಸಕ ವೀರಣ್ಣ ಚರಂತಿಮಠ ಅಭಿನಂದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುರೇಶ ಕೊಣ್ಣೂರ, ತಾಲ್ಲೂಕು ಪಂಚಾಯ್ತಿ ಸದಸ್ಯ ಪರಶುರಾಮ ಛಬ್ಬಿ, ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭುಸ್ವಾಮಿ ಸರಗಣಾಚಾರಿ, ಸಿದ್ದಪ್ಪ ಹೂಗಾರ, ಸಿ.ಎಂ.ಮೇಟಿ, ಸಂಗಯ್ಯ ಸರಗಣಾಚಾರಿ, ವೆಂಕಣ್ಣ ಹಲಗಲಿ, ಸಂಗಪ್ಪ ಕೊಪ್ಪದ, ಮಾನಪ್ಪ ಲಮಾಣಿ, ಅಶೋಕ ರಾಠೋಡ, ದಯಾನಂದ ನಾಯಕ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು