ಗುರುವಾರ , ಮೇ 6, 2021
30 °C

ಕೋವಿಡ್-19: ಕೆಎಸ್ಆರ್‌ಪಿ ಹೆಡ್‌ಕಾನ್‌ಸ್ಟೆಬಲ್ ಹೃದಯಾಘಾತದಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಕೋವಿಡ್ ಸೋಂಕಿಗೆ ತುತ್ತಾಗಿದ್ದ  ಬೆಂಗಳೂರಿನ ಸಶಸ್ತ್ರ ಮೀಸಲು ಪಡೆಯ (ಕೆಎಸ್ಆರ್‌ಪಿ) ಹೆಡ್‌ಕಾನ್‌ಸ್ಟೆಬಲ್  ಮಂಗಳವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಸರೂರು ಗ್ರಾಮದವರಾದ ಅವರು ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದರು.

55 ವರ್ಷದ ಹೆಡ್‌ಕಾನ್‌ಸ್ಟೆಬಲ್ ಅನಾರೋಗ್ಯದ ಕಾರಣ ಇತ್ತೀಚೆಗೆ ಊರಿಗೆ ಮರಳಿದ್ದರು. ಈ ಮೊದಲು ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಮಧುಮೇಹದಿಂದ ಬಳಲುತ್ತಿದ್ದರು.

ಜ್ವರಪೀಡಿತರಾಗಿದ್ದ ಅವರನ್ನು ಸೋಮವಾರ ರಾತ್ರಿ ಮನೆಯವರು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ಧರು. ಅಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು.

'ಆಸ್ಪತ್ರೆಯಲ್ಲಿ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದ ಅವರು ಶೌಚಾಲಯಕ್ಕೆ ತೆರಳಿ ಮರಳುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೋವಿಡ್ ನಿಯಮಾವಳಿ ಅನ್ವಯ ಬಾಗಲಕೋಟೆಯಲ್ಲಿಯೇ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು' ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ ದೇಸಾಯಿ 'ಪ್ರಜಾವಾಣಿ'ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು