ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುನಗುಂದ ಪಟ್ಟಣದಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಬ್ಧ

Last Updated 7 ಏಪ್ರಿಲ್ 2021, 3:08 IST
ಅಕ್ಷರ ಗಾತ್ರ

ಹುನಗುಂದ: ಪಟ್ಟಣದಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಬ್ಧಗೊಂಡಿದ್ದು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. ಬಸ್ ನಿಲ್ದಾಣದಲ್ಲಿ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿದೆ.

ಬಸ್ ನಿಲ್ದಾಣದ ಹೊರಗಡೆ ಪ್ರಯಾಣಿಕರು ಎಂದಿನಂತೆ ಆಗಮಿಸಿದ್ದು ಖಾಸಗಿ ವಾಹನಗಳ ಮೊರೆ ಹೋಗಿದ್ದಾರೆ. ಆಟೊ ಟಂಟಂ, ಖಾಸಗಿ ಬಸ್ಸುಗಳ ಮೂಲಕ ಬೇರೆ ಸ್ಥಳಗಳಿಗೆ ತೆರಳಿದರು.

ಬಸ್ ನಿಲ್ದಾಣದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ವತಿಯಿಂದ ಪಿಎಸ್ ಐಎಎಸ್ಐ ಮತ್ತು ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತೆಗೆ ನಿಯೋಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT