ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಮಂಗಲಿ ಸೇವಾಶ್ರಮದ ಸುಶೀಲಮ್ಮಗೆ ಬಸವಾತ್ಮಜೆ ಪ್ರಶಸ್ತಿ ಗೌರವ

Last Updated 10 ಜನವರಿ 2021, 9:55 IST
ಅಕ್ಷರ ಗಾತ್ರ

ಬಾಗಲಕೋಟೆ: ಇಲ್ಲಿನ ಕೂಡಲಸಂಗಮ ಬಸವ ಧರ್ಮ ಪೀಠದಿಂದ ಮಾತೆ ಮಹಾದೇವಿ ಅವರ ಸ್ಮರಣಾರ್ಥ ನೀಡುವ ಬಸವಾತ್ಮಜೆ ಪ್ರಶಸ್ತಿಗೆ ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಮುಖ್ಯಸ್ಥೆ ಎಸ್.ಜಿ.ಸುಶೀಲಮ್ಮ ಅವರನ್ನು ಆಯ್ಕೆ ಮಾಡಲಾಗಿದೆ.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಈ ವಿವರ ಪ್ರಕಟಿಸಿದ ಬಸವ ಧರ್ಮ ಪೀಠದ ಜಗದ್ಗುರು ಮಾತೆ ಗಂಗಾದೇವಿ, ಜನವರಿ 13 ರಂದು ಕೂಡಲಸಂಗಮದಲ್ಲಿ ನಡೆಯುವ ಶರಣ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶಸ್ತಿ ಪ್ರದಾನ ಮಾಡುವರು ಎಂದು ತಿಳಿಸಿದರು.

ಪ್ರಶಸ್ತಿ ಮೊತ್ತ ₹51 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಶರಣರು ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT