ಕೂಡಲಸಂಗಮ : ಸುಂದರ ಬದುಕಿಗೆ ಶಿಕ್ಷಣ ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣ, ಸಂಸ್ಕಾರ ಪಡೆಯುವುದರ ಮೂಲಕ ಸುಂದರ ಬದುಕು ನಿರ್ಮಿಸಿಕೊಳ್ಳಬೇಕು ಎಂದು ಬಾಗಲಕೋಟೆ ಬಸವೇಶ್ವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ಎಸ್.ಆರ್.ಮನಹಳ್ಳಿ ಹೇಳಿದರು.

ಸೋಮವಾರ ಕೂಡಲಸಂಗಮದ ಸಂಗಮೇಶ್ವರ ಪದವಿ ಪೂರ್ವ ಕಾಲೇಜುನಲ್ಲಿ ನಡೆದ ಬೀಳೂರು ಗುರುಬಸವ ಸ್ವಾಮೀಜಿಯವರ ಶ್ರಾವಣ ಮಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೀಳೂರು ಗುರುಬಸವ ಸ್ವಾಮೀಜಿ ಉತ್ಸವ ಸಮಿತಿ ಸದಸ್ಯ ಗಂಗಾಧರ ನರೆಗಲ್ಲ ಮುಖ್ಯ ಅತಿಥಿಯಾಗಿದ್ದರು. ಸಂಸ್ಕೃತ ಪಾಠ ಶಾಲೆಯಿಂದ ಆರಂಭವಾದ ಬಸವೇಶ್ವರ ವಿದ್ಯಾವರ್ಧಕ ಸಂಘ ಇಂದು ಶಿಕ್ಷಣ ಕ್ಷೇತ್ರದ ಎಲ್ಲ ಕೋರ್ಸಗಳನ್ನು ಹೊಂದಿದೆ. 170 ಅಂಗಸಂಸ್ಥೆಗಳನ್ನು ರಾಜ್ಯದಾದ್ಯಂತ ಹೊಂದಿದ್ದು, ಪ್ರತಿ ವರ್ಷ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಅಧ್ಯಯನ ಮಾಡುವರು 6 ರಿಂದ 7ಸಾವಿರ ಶಿಕ್ಷಕರು ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೀರಣ್ಣ ಚರಂತಿಮಠ ಅವರ ಶಿಸ್ತುಬದ್ದ ಆಡಳಿತದಿಂದ ಬಸವೇಶ್ವರ ವಿದ್ಯಾವರ್ಧಕ ಸಂಘ ಹೆಮ್ಮರವಾಗಿ ಬೆಳೆದಿದೆ. ರಾಜ್ಯದಲ್ಲಿಯೇ ಹೆಸರು ಪಡೆದ ಸಂಘ ಇದಾಗಿದ್ದು, ಶತಮಾನೋತ್ಸವವನ್ನು ಆಚರಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿದೆ ಎಂದರು.

ಬಸವೇಶ್ವರ ವಿದ್ಯಾವರ್ಧಕ ಸಂಘದ ಅಕ್ಷರ ದಾಸೋಹ ವ್ಯವಸ್ಥಾಪಕ ಎಸ್.ಎಸ್.ಹುದ್ದಾರ, ನಿವೃತ್ತ ಮುಖ್ಯೋಪಾಧ್ಯಾಯ ಡಿ.ವಿ.ಶಿಕ್ಕೇರಿ, ಸಂಗಮೇಶ್ವರ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಬಿ.ಆರ್.ಚೌಗಲೆ, ಸಂಗಮೇಶ್ವರ ಪ್ರೌಢ ಶಾಲೆಯ ಮುಖ್ಯಗುರು ಎ.ವಾಯ್.ಕೊಪ್ಪದ, ಸಂಗಮೇಶ್ವರ ಪ್ರಾಥಮಿಕ ಶಾಲೆಯ ಮುಖ್ಯಗುರು ಜಿ.ಬಿ.ಬಡಿಗೇರ ಮುಂತಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.