ಭಾನುವಾರ, ಆಗಸ್ಟ್ 1, 2021
26 °C

ಕೂಡಲಸಂಗಮ, ಬನಶಂಕರಿ: ದರ್ಶನಕ್ಕೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಬಸವಣ್ಣನ ಐಕ್ಯಮಂಟಪ, ಸಂಗಮೇಶ್ವರ ದೇವಾಲಯ ಹಾಗೂ ಬಾದಾಮಿ ಬಳಿಯ ಬನಶಂಕರಿ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಜುಲೈ 5ರಿಂದ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿದೆ.

ಕೂಡಲಸಂಗಮ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಬೀಳಗಿ ತಾಲ್ಲೂಕಿನ ಚಿಕ್ಕಸಂಗಮದ ಸಂಗಮೇಶ್ವರ ದೇವಾಲಯ, ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ಬಸವೇಶ್ವರ ದೇವಾಲಯ, ಬಸವ ಸ್ಮಾರಕ, ಇಂಗಳೇಶ್ವರದ ಮಾದಲಾಂಬಿಕೆ ಸ್ಮಾರಕ, ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿಯ ನೀಲಾಂಬಿಕೆ ಐಕ್ಯ ಸ್ಥಳ, ಬೆಳಗಾವಿ ಜಿಲ್ಲೆ ಎಂ.ಕೆ. ಹುಬ್ಬಳ್ಳಿಯ ಗಂಗಾಬಿಕೆ ಐಕ್ಯಸ್ಥಳಗಳು ಭಕ್ತರ ದರ್ಶನಕ್ಕೆ ಮುಕ್ತವಾಗಲಿವೆ.

ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿಯ ಪ್ರಕಾರ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಈ ಎಲ್ಲ ಶ್ರದ್ಧಾ ಕೇಂದ್ರಗಳು ತೆರೆಯಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು